ADVERTISEMENT

ಪ್ರತಿಮೆ ಹಣ ಮರಳಿಸಬೇಕಿದೆ ಮಾಯಾವತಿ: ಸುಪ್ರೀಂಕೋರ್ಟ್

ಪಿಟಿಐ
Published 9 ಫೆಬ್ರುವರಿ 2019, 10:01 IST
Last Updated 9 ಫೆಬ್ರುವರಿ 2019, 10:01 IST
Mayawati statues
Mayawati statues   

ನವದೆಹಲಿ: ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಅವರುತಮ್ಮ ಹಾಗೂ ಪಕ್ಷದ ಚಿಹ್ನೆ ಆನೆಯ ಪ್ರತಿಮೆ ನಿರ್ಮಾಣಕ್ಕೆ ಮಾಡಿರುವ ವೆಚ್ಚವನ್ನು ಭರಿಸಬೇಕಾಗುತ್ತದೆ ಎಂದು ಸುಪ್ರೀಂಕೋರ್ಟ್ ಶುಕ್ರವಾರ ಅಭಿಪ್ರಾಯಪಟ್ಟಿದೆ.

ಅವರು ಹಣ ಮರಳಿಸಬೇಕಾಗಬಹುದು ಎಂಬುದು ಪೀಠದ ಅಭಿಪ್ರಾಯವಾಗಿದ್ದು, ಈ ಸಂಬಂಧ ಇನ್ನಷ್ಟು ವಿಚಾರಣೆಯ ಅಗತ್ಯವಿದೆ ಎಂದುಮುಖ್ಯನ್ಯಾಯಮೂರ್ತಿರಂಜನ್ ಗೊಗೊಯಿ ನೇತೃತ್ವದ ಪೀಠ ಸ್ಪಷ್ಟಪಡಿಸಿದೆ.

ರಾಜಕೀಯ ಪಕ್ಷವೊಂದರ ಪ್ರಚಾರ ಕಾರ್ಯಕ್ಕೆ ಸರ್ಕಾರದ ಬೊಕ್ಕಸದಿಂದ ಹಣ ವ್ಯಯಿಸುವುದು ಸರಿಯಲ್ಲಿ ಎಂದು ಆರೋಪಿಸಿ ವಕೀಲರೊಬ್ಬರು ಅರ್ಜಿ ಸಲ್ಲಿಸಿದ್ದರು.

ADVERTISEMENT

ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಕ್ ಗುಪ್ತಾ ಅವರನ್ನೊಳಗೊಂಡ ಪೀಠವು, ಏಪ್ರಿಲ್ 2ರಂದು ಅಂತಿಮ ವಿಚಾರಣೆ ನಡೆಸಿ, ಈ ಸಂಬಂಧ ಸ್ಪಷ್ಟ ನಿರ್ದೇಶನ ನೀಡಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.