ADVERTISEMENT

ಉತ್ತರ ಪ್ರದೇಶ ಅಪಘಾತ: ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಮಾಯಾವತಿ ಆಗ್ರಹ

ಏಜೆನ್ಸೀಸ್
Published 16 ಮೇ 2020, 4:48 IST
Last Updated 16 ಮೇ 2020, 4:48 IST
ಮಾಯಾವತಿ
ಮಾಯಾವತಿ   

ಲಖನೌ: ಕರ್ತವ್ಯಗಳನ್ನು ಸರಿಯಾಗಿ ನಿರ್ವಹಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರನ್ನು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಒತ್ತಾಯಿಸಿದ್ದಾರೆ. ಔರೇಯಾದಲ್ಲಿ ಸಂಭವಿಸಿದ ಅಪಘಾತಕ್ಕೆ ಸಂಬಂಧಿಸಿ ಅವರು ಈ ಆಗ್ರಹ ವ್ಯಕ್ತಪಡಿಸಿದ್ದಾರೆ.

‘ಉತ್ತರ ಪ್ರದೇಶಕ್ಕೆ ಬರುವ ಮತ್ತು ರಾಜ್ಯದ ಮೂಲಕ ಇತರೆಡೆಗಳಿಗೆ ಪ್ರಯಾಣಿಸುವ ವಲಸೆ ಕಾರ್ಮಿಕರಿಗೆ ಅಧಿಕಾರಿಗಳು ಆಹಾರ, ಪ್ರಯಾಣ ಮತ್ತು ವಸತಿಗೆ ಎಲ್ಲ ರೀತಿಯ ವ್ಯವಸ್ಥೆ ಮಾಡಿಕೊಡಲಿದ್ದಾರೆ ಎಂದು ಮುಖ್ಯಮಂತ್ರಿಗಳು ನಿನ್ನೆ ಹೇಳಿದ್ದರು. ಆದರೆ ಮುಖ್ಯಮಂತ್ರಿಗಳ ನಿರ್ದೇಶನವೇ ಸರಿಯಾಗಿ ಪಾಲನೆಯಾಗದಿರುವುದು ದುರದೃಷ್ಟಕರ. ಔರೇಯಾದಲ್ಲಿ ಸಂಭವಿಸಿರುವುದು ಅತಿ ದೊಡ್ಡ ಅಪಘಾತ’ ಎಂದು ಮಾಯಾವತಿ ಹೇಳಿದ್ದಾರೆ.

ಅಪಘಾತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಮತ್ತು ಗಾಯಾಳುಗಳಿಗೆ ಹಣಕಾಸು ನೆರವು ನೀಡಬೇಕು ಎಂದೂ ಅವರು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.