ADVERTISEMENT

ಪವನ್‌ ಕಲ್ಯಾಣ್‌ ನೇತೃತ್ವದ ಜನಸೇನಾ, ಬಿಎಸ್‌ಪಿ ಮೈತ್ರಿ

​ಪ್ರಜಾವಾಣಿ ವಾರ್ತೆ
Published 15 ಮಾರ್ಚ್ 2019, 13:23 IST
Last Updated 15 ಮಾರ್ಚ್ 2019, 13:23 IST
   

ಲಖನೌ: ಮಾಯಾವತಿ ನೇತೃತ್ವದ ಬಹುಜನಸಮಾಜ ಪಕ್ಷ ಹಾಗೂ ತೆಲುಗು ನಟ ಪವನ್‌ ಕಲ್ಯಾಣ್‌ ನೇತೃತ್ವದ ಜನಸೇನಾಪಕ್ಷಗಳು ಮುಂಬರುವ ಲೋಕಸಭಾ ಚುನಾವಣೆಗೆ ಮೈತ್ರಿ ಮಾಡಿಕೊಂಡಿವೆ.

ಇಲ್ಲಿ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದಪವನ್‌ ಕಲ್ಯಾಣ್‌,ಮಾಯಾವತಿ ದೇಶದ ಮುಂದಿನ ಪ್ರಧಾನಿಯಾಗಬೇಕು ಎಂದರು.ಲೋಕಸಭೆ ಮತ್ತು ಆಂಧ್ರಪ್ರದೇಶದ ವಿಧಾನಸಭಾ ಚುನಾವಣೆಗೆ ಉಭಯ ಪಕ್ಷಗಳು ಮೈತ್ರಿ ಮಾಡಿಕೊಂಡಿವೆ ಎಂದು ಹೇಳಿದರು.

ಮಾಯವತಿ ಅವರನ್ನು ಭಾರತದ ಮುಂದಿನ ಪ್ರಧಾನಿ ಮಾಡುವುದೇ ನಮ್ಮ ಗುರಿ, ಖಂಡಿತವಾಗಿಯೂ ಅವರನ್ನು ಪ್ರಧಾನಮಂತ್ರಿ ಮಾಡುತ್ತೇವೆ ಎಂದರು. ಇದೇ ವೇಳೆ ಮಾತನಾಡಿದ ಮಾಯಾವತಿ ಪವನ್‌ ಕಲ್ಯಾಣ್‌ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಬೇಕು ಎಂದರು.

ADVERTISEMENT

ಟಿಡಿಪಿ, ಟಿಎಂಸಿ, ಕಾಂಗ್ರೆಸ್‌ ಮತ್ತು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಪವನ್‌ ಕಲ್ಯಾಣ್‌,ಕಾಂಗ್ರೆಸ್‌ ಮತ್ತು ಬಿಜೆಪಿಯೇತರ ಪಕ್ಷಗಳು ಈ ಭಾರಿದೇಶದ ಗದ್ದುಗೆ ಹಿಡಿಯುವುದು ಖಚಿತ ಎಂದು ಭವಿಷ್ಯ ನುಡಿದರು.

ಸ್ಥಾನ ಹಂಚಿಕೆ ಕುರಿತಂತೆಉಭಯ ಪಕ್ಷಗಳು ಇನ್ನು ಯಾವುದೇ ತೀರ್ಮಾನಕ್ಕೆ ಬಂದಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.