ನವದೆಹಲಿ: ಭಾರತೀಯ ಸೇನೆಯನ್ನು ಮೋದಿ ಸೇನೆ ಎಂದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರಿಗೆ ಚುನಾವಣಾ ಆಯೋಗವು ಇನ್ನು ಮುಂದೆ ಮಾತನಾಡುವಾಗ ಎಚ್ಚರದಿಂದಿರಿ ಎಂದು ಹೇಳಿತ್ತು.ಚುನಾವಣಾ ಆಯೋಗದ ನಯವಾದ ಎಚ್ಚರಿಕೆ ವಿರುದ್ಧ ಗುಡುಗಿರುವ ಕಾಂಗ್ರೆಸ್, ಇದೀಗ ಎಂಸಿಸಿ(ಚುನಾವಣಾ ನೀತಿಸಂಹಿತೆ) Modi Code of Conduct ಆಗಿ ಬದಲಾಗಿದೆ ಎಂದಿದೆ.
ಕಾಂಗ್ರೆಸ್ ಪಕ್ಷದ ವಕ್ತಾರ ರಣ್‍ದೀಪ್ ಸಿಂಗ್ ಸುರ್ಜೇವಾಲ ಈ ಬಗ್ಗೆ ಟ್ವೀಟ್ ಮಾಡಿದ್ದು, ಆದಿತ್ಯನಾಥರು ಭಾರತೀಯ ಸೇನೆಯನ್ನು ಅವಮಾನಿಸಿದರೂ ಚುನಾವಣಾ ಆಯೋಗ ಅವರಿಗೆ ಪ್ರೇಮ ಪತ್ರ ಬರೆಯುತ್ತಿದೆ.
ನೀತಿ ಆಯೋಗದ ಉಪಾಧ್ಯಕ್ಷ ರಾಜೀವ್ ಕುಮಾರ್ ಅವರು ಕಾಂಗ್ರೆಸ್ ಪ್ರಸ್ತಾಪ ಮಾಡಿದ ನ್ಯಾಯ್ (ಕನಿಷ್ಠ ಆದಾಯ ಯೋಜನೆ)ಯನ್ನು ಟೀಕಿಸಿದರೆ ಚುನಾವಣಾ ಆಯೋಗವು ಇನ್ನು ಮುಂದೆ ನೀವು ಹಾಗೆ ಮಾಡಬೇಡಿ ಎಂದು ಹೇಳುತ್ತದೆ.
ಈ ಚುನಾವಣಾ ಆಯೋಗವು ಯಾಕೆ ಅಧಿಕಾರದಲ್ಲಿರುವವರ ಬಗ್ಗೆ ಸತ್ಯ ಹೇಳಲು ಹಿಂದೇಟು ಹಾಕುತ್ತಿದೆ ಎಂದು ಪ್ರಶ್ನಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.