ADVERTISEMENT

‌ದೆಹಲಿ ಪಾಲಿಕೆ ಚುನಾವಣೆ: ಎಎಪಿ ಭರವಸೆ ವಿರುದ್ಧ ಬಿಜೆಪಿ ವಾಗ್ದಾಳಿ

​ಪ್ರಜಾವಾಣಿ ವಾರ್ತೆ
Published 11 ನವೆಂಬರ್ 2022, 15:22 IST
Last Updated 11 ನವೆಂಬರ್ 2022, 15:22 IST
ಸಂಬಿತ್‌ ಪಾತ್ರಾ
ಸಂಬಿತ್‌ ಪಾತ್ರಾ   

ನವದಹೆಲಿ:ಮಹಾನಗರ ಪಾಲಿಕೆಚುನಾವಣೆ ಹಿನ್ನೆಲೆಯಲ್ಲಿ 10 ಭರವಸೆಗಳನ್ನು ಈಡೇರಿಸುವುದಾಗಿ ಘೋಷಿಸಿದ ಎಎಪಿ ವಿರುದ್ಧ ಶುಕ್ರವಾರ ವಾಗ್ದಾಳಿ ನಡೆಸಿರುವ ಬಿಜೆಪಿ, ತಮ್ಮ ಹೆಸರಿನಲ್ಲಿ ವಾರಂಟ್ ಪಡೆದಿರುವವರು ಭರವಸೆಗಳ ಬಗ್ಗೆ ಖಾತರಿ ನೀಡಲು ಸಾಧ್ಯವಿಲ್ಲ ಎಂದು ವ್ಯಂಗ್ಯವಾಡಿದೆ.

ದೆಹಲಿಯಲ್ಲಿ ಪ್ರಾಮಾಣಿಕ ಸರ್ಕಾರ ಖಾತರಿಪಡಿಸಿದವರು, ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಪುರಾವೆಗಳನ್ನು ನಾಶಪಡಿಸಲು ₹1.2 ಕೋಟಿ ಮೌಲ್ಯದ 140 ಮೊಬೈಲ್ ಫೋನ್‌ಗಳನ್ನು ಬದಲಾಯಿಸಿದ್ದಾರೆ ಎಂದು ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.

ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿದಂತೆ ಮೂರು ಡಜನ್ ವಿಐಪಿಗಳು ಡಿಜಿಟಲ್ ಪುರಾವೆಗಳನ್ನು ನಾಶಪಡಿಸುವ ಉದ್ದೇಶದಿಂದ ಸುಮಾರು 140 ಮೊಬೈಲ್ ಫೋನ್‌ಗಳನ್ನು ಬದಲಾಯಿಸಿದ್ದಾರೆ ಎಂದುದೆಹಲಿ ಅಬಕಾರಿ ನೀತಿಯಲ್ಲಿನ ಅಕ್ರಮಗಳ ಕುರಿತು ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ ಗುರುವಾರ ಪಿಎಂಎಲ್‌ಎ ನ್ಯಾಯಾಲಯಕ್ಕೆ ತಿಳಿಸಿದೆ.‌ ಸಿಸೋಡಿಯಾ ಈ ಪ್ರಕರಣದಲ್ಲಿ ಆರೋಪಿಯಾಗಿದ್ದಾರೆ.

ADVERTISEMENT

ಮನೀಶ್ ಸಿಸೋಡಿಯಾ ಸೇರಿದಂತೆ ಅಬಕಾರಿ ನೀತಿ ಹಗರಣದ ಆರೋಪಿಗಳಾದ 34 ಜನರು ತಮ್ಮ ಡಿಜಿಟಲ್ ಹೆಜ್ಜೆ ಗುರುತು ಮರೆಮಾಚಲು ಮೊಬೈಲ್ ಫೋನ್‌ಗಳನ್ನು ಬದಲಾಯಿಸಿದ್ದಾರೆ. ಅರವಿಂದ್ ಕೇಜ್ರಿವಾಲ್ ನಿರ್ದೇಶನದಂತೆ ಸಿಸೋಡಿಯಾ ಇದೆಲ್ಲವನ್ನೂ ಮಾಡಿದ್ದಾರೆ ಎಂದು ಪಾತ್ರಾ ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.