ADVERTISEMENT

ದೆಹಲಿ ಪಾಲಿಕೆ ಚುನಾವಣೆ: ಬಿಜೆಪಿಯ 11 ಬಂಡಾಯ ಅಭ್ಯರ್ಥಿಗಳು ಅಮಾನತು

ಪಿಟಿಐ
Published 22 ನವೆಂಬರ್ 2022, 2:39 IST
Last Updated 22 ನವೆಂಬರ್ 2022, 2:39 IST
ಬಿಜೆಪಿ
ಬಿಜೆಪಿ   

ನವದೆಹಲಿ: ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಚುನಾವಣೆ ಸಮೀಪಿಸುತ್ತಿರುವಂತೆಯೇ ಟಿಕೆಟ್ ಆಕಾಂಕ್ಷಿಗಳ ಬಂಡಾಯ ಜೋರಾಗಿದೆ. ಆದರೆ, ಬಿಜೆಪಿ ಇದಕ್ಕೆ ತಲೆಕೆಡಿಸಿಕೊಳ್ಳದೇ ಬಂಡಾಯ ಅಭ್ಯರ್ಥಿಗಳಿಗೆ ಬಿಸಿ ಮುಟ್ಟಿಸುವ ಪ್ರಕ್ರಿಯೆ ನಡೆಸಿದೆ.

ದೆಹಲಿ ಬಿಜೆಪಿ ಅಧ್ಯಕ್ಷ ಆದೇಶ್ ಗುಪ್ತಾ 11 ಬಂಡಾಯ ಅಭ್ಯರ್ಥಿಗಳನ್ನು 6 ವರ್ಷಗಳ ಕಾಲ ಪಕ್ಷದಿಂದ ಅಮಾನತು ಮಾಡಿ ಆದೇಶ ಮಾಡಿದ್ದಾರೆ. ಈ 11 ಜನ ಬಿಜೆಪಿಯ ಅಧಿಕೃತ ಅಭ್ಯರ್ಥಿಗಳ ಎದುರು ಚುನಾವಣೆಗೆ ಸ್ಪರ್ಧಿಸಲು ಅಣಿಯಾಗಿದ್ದರು.

ಅಮಾನತುಗೊಂಡವರಲ್ಲಿ ಟಿಕೆಟ್ ಪಡೆದು ಚುನಾವಣೆಗೆ ಸ್ಪರ್ಧೆಗೆ ತಯಾರಿ ನಡೆಸಿದ್ದ ಹಿರಿಯ ನಾಯಕ ಗಜೇಂದ್ರ ದಾರಲ್ ಕೂಡ ಸೇರಿದ್ದಾರೆ. ಕೊನೆ ಕ್ಷಣದಲ್ಲಿ ಇವರ ಬದಲು ಅರುಣ್ ದಾರಲ್ ಅವರಿಗೆ ಟಿಕೆಟ್ ನೀಡಿದ್ದರಿಂದ ಅವರು ಬಂಡಾಯ ಎದ್ದಿದ್ದಾರೆ.

ADVERTISEMENT

ದೆಹಲಿ ಮಹಾನಗರ ಪಾಲಿಕೆಯ 250 ವಾರ್ಡ್‌ಗಳಿಗೆ ಡಿಸೆಂಬರ್ 4ರಂದು ಚುನಾವಣೆ ನಡೆಯಲಿದ್ದು, ಡಿ.7ರಂದು ಮತ ಎಣಿಕೆಯ ನಂತರ ಫಲಿತಾಂಶ ಪ್ರಕಟಗೊಳ್ಳಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.