ADVERTISEMENT

ದೆಹಲಿ ಮಹಾನಗರ ಪಾಲಿಕೆ ಚುನಾವಣೆ: ಸ್ವಚ್ಛ ನಗರಕ್ಕಾಗಿ ಮತ ನೀಡಿ ಎಂದ ಕೇಜ್ರಿವಾಲ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 4 ಡಿಸೆಂಬರ್ 2022, 4:06 IST
Last Updated 4 ಡಿಸೆಂಬರ್ 2022, 4:06 IST
ಅರವಿಂದ ಕೇಜ್ರಿವಾಲ್
ಅರವಿಂದ ಕೇಜ್ರಿವಾಲ್   

ನವದೆಹಲಿ: ದೆಹಲಿ ಮಹಾನಗರ ಪಾಲಿಕೆಯ (ಎಂಸಿಡಿ) 250 ವಾರ್ಡ್‌ಗಳಿಗೆ ಇಂದು ಮತದಾನ ನಡೆಯುತ್ತಿದೆ.

ಮಹಾನಗರ ಪಾಲಿಕೆ ಚುನಾವಣೆ ಕುರಿತು ಟ್ವೀಟ್ ಮಾಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ‘ಇಂದಿನ ಚುನಾವಣೆ ದೆಹಲಿಯನ್ನು ಸ್ವಚ್ಛ, ಸುಂದರವಾಗಿಸಲು ಹಾಗೂ ನಾಗರಿಕ ಆಡಳಿತವನ್ನು ಭ್ರಷ್ಟಾಚಾರ ಮುಕ್ತಗೊಳಿಸಲು ಬಹುಮುಖ್ಯವಾಗಿದೆ. ಪ್ರಾಮಾಣಿಕ ಆಡಳಿತ ವ್ಯವಸ್ಥೆಯನ್ನು ಆಯ್ಕೆ ಮಾಡಲು ಇಂದು ತಮ್ಮ ಮತವನ್ನು ಚಲಾಯಿಸುವಂತೆ ನಾನು ಎಲ್ಲಾ ದೆಹಲಿ ನಿವಾಸಿಗಳಿಗೆ ಮನವಿ ಮಾಡುತ್ತೇನೆ’ ಎಂದಿದ್ದಾರೆ.

‘ಬಿಜೆಪಿ 15 ವರ್ಷಗಳಿಂದ ದೆಹಲಿಗೆ ಏನನ್ನೂ ಮಾಡಿಲ್ಲ, ಜನರಿಗಾಗಿ ಕೆಲಸ ಮಾಡುವಲ್ಲಿ ಸಂಪೂರ್ಣ ವಿಫಲವಾಗಿದೆ. ಮಹಾನಗರ ಪಾಲಿಕೆ ಚುನಾವಣೆಯಲ್ಲಿ 1.5 ಕೋಟಿ ಜನರು ಮತ ಚಲಾಯಿಸಲಿದ್ದಾರೆ. ಸ್ವಚ್ಛ ಮತ್ತು ಕಸ ಮುಕ್ತ ನಗರಕ್ಕಾಗಿ ಮತದಾರರಿಗೆ ಮತ ಚಲಾಯಿಸುವಂತೆ ಮನವಿ ಮಾಡುತ್ತೇನೆ’ ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹೇಳಿದ್ದಾರೆ.

ADVERTISEMENT

ಎಂಸಿಡಿ ಚುನಾವಣೆಯಲ್ಲಿ 1.45 ಕೋಟಿಗೂ ಅಧಿಕ ಮತದಾರರು ತಮ್ಮ ಹಕ್ಕು ಚಲಾಯಿಸಲು ಅರ್ಹರಾಗಿದ್ದಾರೆ. 1,349 ಅಭ್ಯರ್ಥಿಗಳು ಕಣದಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಡಿಸೆಂಬರ್‌ 7ರಂದು ಮತಎಣಿಕೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.