ADVERTISEMENT

ವಿಶ್ವಸಂಸ್ಥೆಯಲ್ಲಿ ಭಾರತದ ಶಾಶ್ವತ ಪ್ರತಿನಿಧಿ ಬಾಗ್ಚಿ

ಪಿಟಿಐ
Published 16 ಅಕ್ಟೋಬರ್ 2023, 16:41 IST
Last Updated 16 ಅಕ್ಟೋಬರ್ 2023, 16:41 IST
 ಅರಿಂದಮ್‌ ಬಾಗ್ಚಿ
 ಅರಿಂದಮ್‌ ಬಾಗ್ಚಿ   

ನವದೆಹಲಿ : ವಿದೇಶಾಂಗ ಸಚಿವಾಲಯದ ವಕ್ತಾರರಾಗಿದ್ದ ಅರಿಂದಮ್‌ ಬಾಗ್ಚಿ ಅವರನ್ನು ವಿಶ್ವಸಂಸ್ಥೆಯಲ್ಲಿನ ಭಾರತದ ಶಾಶ್ವತ ಪ್ರತಿನಿಧಿಯಾಗಿ ಕೇಂದ್ರ ಸರ್ಕಾರವು ನೇಮಕ ಮಾಡಿದೆ.  

1995ನೇ ತಂಡದ ಭಾರತೀಯ ವಿದೇಶಾಂಗ ಸೇವೆಯ ಅಧಿಕಾರಿಯಾಗಿರುವ ಬಾಗ್ಚಿ ಅವರು ಮಾರ್ಚ್‌ 2020ರಿಂದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರರಾಗಿದ್ದು, ಕೋವಿಡ್‌–19 ಸಂದರ್ಭ, ಭಾರತದ ಅಧ್ಯಕ್ಷತೆಯಲ್ಲಿ ನಡೆದಿದ್ದ ಜಿ20 ಶೃಂಗಸಭೆ, ಪೂರ್ವ ಈಶಾನ್ಯ ಗಡಿವಿವಾದ ಸಂದರ್ಭಗಳನ್ನು ನಿಭಾಯಿಸಿದ್ದರು. 

ಜಿನೀವಾದಲ್ಲಿ ವಿಶ್ವಸಂಸ್ಥೆಯ ಭಾರತದ ಶಾಶ್ವತ ಪ್ರತಿನಿಧಿಯಾಗಿ ಅವರು ಶೀಘ್ರದಲ್ಲಿಯೇ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಹೇಳಿಕೆ ತಿಳಿಸಿದೆ. ಬಾಗ್ಚಿ ಈ ಹಿಂದೆ ಕ್ರೊವೇಷಿಯಾದಲ್ಲಿ ಭಾರತದ ರಾಯಭಾರಿಯಾಗಿ ಕಾರ್ಯನಿರ್ವಹಿಸಿದ್ದರು.

 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.