ADVERTISEMENT

ಹಿಮಾಚಲ ಪ್ರದೇಶ: ‘ನೆಕ್ಸ್ಟ್‌’ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 1 ಜುಲೈ 2023, 15:33 IST
Last Updated 1 ಜುಲೈ 2023, 15:33 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಹಮೀರ್‌ಪುರ್‌ (ಹಿಮಾಚಲ ಪ್ರದೇಶ): ಅಲ್ಪಾವಧಿಯಲ್ಲಿಯೇ ರಾಷ್ಟ್ರೀಯ ನಿರ್ಗಮನ ಪರೀಕ್ಷೆಯನ್ನು (ನೆಕ್ಸ್ಟ್‌) ನಡೆಸುವ ನಿರ್ಧಾರವನ್ನು ವಿರೋಧಿಸಿ ಇಲ್ಲಿಯ ಡಾ. ರಾಧಾಕೃಷ್ಣ ಸರ್ಕಾರಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು ಶನಿವಾರ ಪ್ರತಿಭಟನೆ ನಡೆಸಿದರು.

2019ರ ಸಾಲಿನ ಎಂಬಿಬಿಎಸ್‌ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮುಂದಿನ ವರ್ಷ ಮೇ ಮತ್ತು ನವೆಂಬರ್‌ನಲ್ಲಿ ಎರಡು ಹಂತಗಳಲ್ಲಿ ‘ನೆಕ್ಸ್ಟ್‌’ ಪರೀಕ್ಷೆ ನಡೆಸುವುದಾಗಿ ರಾಷ್ಟ್ರೀಯ ವೈದ್ಯಕೀಯ ಆಯೋಗವು ಘೋಷಿಸಿದೆ. ಈ ನಿರ್ಧಾರಕ್ಕೆ ವಿದ್ಯಾರ್ಥಿಗಳು ವಿರೋಧ ವ್ಯಕ್ತಪಡಿಸಿದ್ದಾರೆ.

‘ಕಾಲೇಜಿನ ತರಗತಿಗಳಿಗೂ ಹಾಜರಾಗುತ್ತಾ, ರಾಷ್ಟ್ರಮಟ್ಟದ ಪರೀಕ್ಷೆಗೆ ಅಲ್ಪಾವಧಿಯಲ್ಲಿ ತಯಾರಿ ಮಾಡಿಕೊಳ್ಳುವುದು ಕಷ್ಟಕರ. ಇದು ಅನ್ಯಾಯ. ಈ ನಿರ್ಧಾರದ ವಿರುದ್ಧ ನಾವೆಲ್ಲರೂ ಒಟ್ಟಾಗಿ ನಿಲ್ಲುತ್ತೇವೆ’ ಎಂದು ಪ್ರತಿಭಟನೆ ನಿರತ ವಿದ್ಯಾರ್ಥಿಗಳು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.