ನರೇಂದ್ರ ಮೋದಿ ಮತ್ತು ಜಾರ್ಜಿಯಾ ಮೆಲೋನಿ
ನವದೆಹಲಿ: ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಕ್ಲಿಕ್ಕಿಸಿರುವ ಸೆಲ್ಫಿ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ‘ಸ್ನೇಹಿತರನ್ನು ಭೇಟಿಯಾಗುವುದೇ ಒಂದು ಖುಷಿ’ ಎಂದು ಮೆಲೋನಿ ಅವರ ಪೋಸ್ಟ್‌ಗೆ ಮೋದಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ದುಬೈನಲ್ಲಿ ನಡೆಯುತ್ತಿರುವ ವಿಶ್ವಸಂಸ್ಥೆಯ ಸಿಒಪಿ28 ಹವಾಮಾನ ಶೃಂಗಸಭೆಯಲ್ಲಿ ಭಾಗವಹಿಸಿದ್ದ ಮೋದಿ ಅವರು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರೊಂದಿಗೆ ಸೆಲ್ಫಿಗೆ ಪೋಸ್ ನೀಡಿದ್ದರು.
ಈ ಫೋಟೊವನ್ನು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಮೆಲೋನಿ ಅವರು, ‘ಗುಡ್ ಫ್ರೆಂಡ್ಸ್ ಅಟ್ ಸಿಒಪಿ28’ ಎಂದು ಬರೆದುಕೊಂಡು #Melodi ಎಂಬ ಹ್ಯಾಶ್ ಟ್ಯಾಕ್ ನೀಡಿದ್ದರು. ಮೆಲೋನಿ ಅವರ ಈ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು.
ಹವಾಮಾನ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸೇರಿದಂತೆ ವಿಶ್ವದ ಪ್ರಮುಖ ನಾಯಕರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.