ADVERTISEMENT

ಕೃಷಿ ಕಾಯ್ದೆ: ಸರ್ಕಾರ, ರೈತರ ನಡುವಿನ ಚರ್ಚೆ ರಾತ್ರಿಯೂ ಮುಂದುವರೆಯುವ ಸಾಧ್ಯತೆ

​ಪ್ರಜಾವಾಣಿ ವಾರ್ತೆ
Published 30 ಡಿಸೆಂಬರ್ 2020, 12:26 IST
Last Updated 30 ಡಿಸೆಂಬರ್ 2020, 12:26 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ವಿವಾದಿತ ಕೃಷಿ ಕಾಯ್ದೆಗೆ ಸಂಬಂಧಿಸಿದಂತೆ ರೈತರು ಮತ್ತು ಸರ್ಕಾರದ ನಡುವೆ ಬುಧವಾರ 6 ಸುತ್ತಿನ ಮಾತುಕತೆ ನಡೆದರೂ ಯಾವುದೇ ಒಮ್ಮತದ ಅಭಿಪ್ರಾಯಕ್ಕೆ ಬರಲು ಇಲ್ಲಿಯತನಕ ಸಾಧ್ಯವಾಗಿಲ್ಲ ಎಂದು ಮಾಧ್ಯಮಗಳು ವರದಿ ಮಾಡಿವೆ.

ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್‌ ಹಾಗೂ ಸಚಿವರಾದ ಸೋಮ್‌ ಪ್ರಕಾಶ್‌, ಪಿಯೂಶ್‌ ಗೋಯಲ್‌ ಅವರು ಸಂಸತ್ತಿನ ವಿಜ್ಞಾನ ಭವನದಲ್ಲಿ 40ಕ್ಕೂ ಹೆಚ್ಚು ರೈತ ಮುಖಂಡರೊಂದಿಗೆ ಸಭೆ ನಡೆಸಿದ್ದಾರೆ. 6 ಸುತ್ತಿನ ಮಾತುಕತೆಗಳು ನಡೆದಿದ್ದ ಒಮ್ಮತದ ಅಭಿಪ್ರಾಯಕ್ಕೆ ಬರಲು ಸಾಧ್ಯವಾಗಿಲ್ಲ ಎನ್ನಲಾಗಿದೆ.

ನೂತನ ಕಾಯ್ದೆಯಿಂದ ಹೊರಗೆ ಇಟ್ಟಿರುವ ಪ್ರಮುಖ ಮೂರು ಅಂಶಗಳನ್ನು ಮತ್ತೆ ಕಾಯ್ದೆ ವ್ಯಾಪ್ತಿಗೆ ತರಲು ಸರ್ಕಾರ ಒಪ್ಪಿಗೆ ಸೂಚಿಸಿದೆ ಎಂದು ರೈತ ಮುಖಂಡ ಬಲದೇವ್‌ ಸಿಂಗ್ ಸಿರ್ಸಾ ಹೇಳಿದ್ದಾರೆ.

ADVERTISEMENT

ರೈತರೊಂದಿಗೆ ರಾತ್ರಿಯೂ ಕೂಡ ಸಭೆ ನಡೆಯಲಿದ್ದ ನಿರ್ಣಾಯಕ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ವಿವಾದಿತ ಕೃಷಿಕಾಯ್ದೆಗಳನ್ನು ಹಿಂತೆಗೆದುಕೊಳ್ಳುವ ಕಾರ್ಯವಿಧಾನ, ಕನಿಷ್ಠ ಬೆಂಬಲ ಬೆಲೆಯನ್ನು ಕಾನೂನಾತ್ಮಕವಾಗಿ ಖಾತರಿಗೊಳಿಸುವುದು ಹಾಗೂ ಈ ಹಿಂದೆ ಪ್ರಸ್ತಾಪಿಸಲಾದ ಎರಡು ವಿಚಾರಗಳು ಕಡ್ಡಾಯವಾಗಿ ಮಾತುಕತೆಯ ಭಾಗವಾಗಿರಬೇಕು’ ಎಂದು 40 ರೈತ ಸಂಘಟನೆಗಳನ್ನು ಪ್ರತಿನಿಧಿಸುವ ‘ಸಂಯುಕ್ತ ಕಿಸಾನ್‌ ಮೋರ್ಚಾ’ ಸರ್ಕಾರಕ್ಕೆ ಮಂಗಳವಾರವೇ ಪತ್ರ ಬರೆದಿತ್ತು. ಇದರ ಬಗ್ಗೆಯೂ ಇಂದಿನ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.