ಶಿಲ್ಲಾಂಗ್: ಅಸ್ಸಾಂನಿಂದ ಅಕ್ರಮ ವಲಸಿಗರು ರಾಜ್ಯದೊಳಗೆ ನುಸುಳುವ ಸಾಧ್ಯತೆ ಇರುವುದರಿಂದ ಹೆಚ್ಚಿನ ನಿಗಾ ವಹಿಸುವಂತೆ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳಿಗೆ ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಕೆ. ಸಂಗ್ಮಾ ಅವರು ಗುರುವಾರ ಸೂಚಿಸಿದರು.
ಮುಖ್ಯ ಕಾರ್ಯದರ್ಶಿ, ಡಿಜಿಪಿ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಗೃಹ), ರಾಜಕೀಯ ಇಲಾಖೆಯ ಅಧಿಕಾರಿಗಳು, ಜಿಲ್ಲಾಧಿಕಾರಿಗಳನ್ನು ಒಳಗೊಂಡ ಉನ್ನತ ಮಟ್ಟದ ಸಭೆಯಲ್ಲಿ ಅವರು ಈ ನಿರ್ದೇಶನ ನೀಡಿದರು.
‘ಸರ್ಕಾರವು ಜಿಲ್ಲಾಧಿಕಾರಿಗಳೊಂದಿಗೆ ನಿರಂತರವಾಗಿ ಮಾತುಕತೆ ನಡೆಸುತ್ತಿದೆ. ವಿಭಾಗೀಯ ಅಭಿವೃದ್ಧಿ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ, ಗ್ರಾಮ ರಕ್ಷಣಾ ಪಡೆಗಳು, ಸರ್ಕಾರೇತರ ಸಂಘಟನೆಗಳ ಜೊತೆ ಜಿಲ್ಲಾಧಿಕಾರಿಗಳು ನೇರ ಸಂಪರ್ಕದಲ್ಲಿದ್ದಾರೆ’ ಎಂದು ತಿಳಿಸಿದರು.
ಅಸ್ಸಾಂನೊಂದಿಗೆ ಗಡಿ ಹಂಚಿಕೊಂಡಿರುವ ಜಿಲ್ಲೆಗಳಲ್ಲಿ ಒಳನುಸುಳುವ ಸಾಧ್ಯತೆ ಹೆಚ್ಚಿರುವುದರಿಂದ ಆ ಜಿಲ್ಲೆಗಳ ಮೇಲೆ ಕಣ್ಗಾವಲಿಡಲಾಗಿದೆ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.