
ಶಿಲ್ಲಾಂಗ್: ಮೇಘಾಲಯದ ಪೂರ್ವ ಜೈಯ್‌ಂತಿಯಾ ಹಿಲ್ಸ್ ಜಿಲ್ಲೆಯ ಅಕ್ರಮ ಕಲ್ಲಿದ್ದಲು ಗಣಿಯೊಂದರಲ್ಲಿ ಸಂಭವಿಸಿದ್ದ ಸ್ಫೋಟದ ಪರಿಣಾಮವಾಗಿ ಮೃತಪಟ್ಟವರ ಸಂಖ್ಯೆ 25ಕ್ಕೆ ಏರಿಕೆಯಾಗಿದೆ.
ಥಾಂಗ್ಸ್‌ಕು ಪ್ರದೇಶದಲ್ಲಿ ಗುರುವಾರ ಅವಘಡ ಸಂಭವಿಸಿತ್ತು. ಅದೇ ದಿನ 18 ಮೃತದೇಹಗಳು ಪತ್ತೆಯಾಗಿದ್ದವು. ಶುಕ್ರವಾರ ಏಳು ಶವಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಶೋಧ ಕಾರ್ಯಾಚರಣೆ ಮುಂದುವರಿದಿದೆ. ರಾಜ್ಯ ತುರ್ತು ಪ್ರತಿಸ್ಪಂದನ ಪಡೆ, ವಿಶೇಷ ರಕ್ಷಣಾ ತಂಡ ಮತ್ತು ರಾಷ್ಟ್ರೀಯ ವಿಪತ್ತು ಪ್ರತಿಸ್ಪಂದನ ಪಡೆಗಳು ಕಾರ್ಯಾಚರಣೆ ನಡೆಸುತ್ತಿದ್ದಾವೆ.
‘ಇತರ ಕಾರ್ಮಿಕರು ಅವಶೇಷಗಳಡಿ ಸಿಲುಕಿದ್ದಾರೆಯೇ ಎಂದು ಪತ್ತೆ ಮಾಡಲು ಪ್ರಯತ್ನಿಸುತ್ತಿದ್ದೇವೆ’ ಎಂದು ಪೊಲೀಸರು ತಿಳಿಸಿದ್ದಾರೆ.
ಪರಿಸರ ಹಾನಿ ಮತ್ತು ಸುರಕ್ಷತಾ ಅಪಾಯಗಳನ್ನು ಉಲ್ಲೇಖಿಸಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) 2014ರಲ್ಲಿ ಮೇಘಾಲಯದಲ್ಲಿ ಇಲಿ ರಂಧ್ರ ಕಲ್ಲಿದ್ದಲು ಗಣಿಗಾರಿಕೆ ಮತ್ತು ಇತರ ಅವೈಜ್ಞಾನಿಕ ಗಣಿಗಾರಿಕೆಗೆ ನಿಷೇಧ ಹೇರಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.