
ಶಿಲ್ಲಾಂಗ್: ಮೇಘಾಲಯದ ಪೂರ್ವ ಜಯಂತಿಯಾ ಹಿಲ್ಸ್ ಜಿಲ್ಲೆಯಲ್ಲಿ ಅಕ್ರಮ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ್ದ ಸ್ಫೋಟದಲ್ಲಿ ಇಬ್ಬರ ಶವಗಳು ಶನಿವಾರ ಪತ್ತೆಯಾಗಿದ್ದು, ಮೃತಪಟ್ಟವರ ಸಂಖ್ಯೆ 27ಕ್ಕೆ ಏರಿಕೆಯಾಗಿದೆ.
ಉಮ್ಸಂಗತ್ ಗ್ರಾಮದ ಥಾಂಗ್ಸ್‌ಕು ಪ್ರದೇಶದಲ್ಲಿ ಗುರುವಾರ ಸ್ಫೋಟ ಸಂಭವಿಸಿತ್ತು.
‘ಅವಘಡದಲ್ಲಿ ಇನ್ನೂ ಅನೇಕರು ನಾಪತ್ತೆಯಾಗಿದ್ದು, ರಕ್ಷಣಾ ತಂಡಗಳು ಶೋಧ ಕಾರ್ಯವನ್ನು ಮುಂದುವರಿಸಿವೆ. ಮೃತರ ಗುರುತು ಪತ್ತೆ ಕಾರ್ಯ ನಡೆಯುತ್ತಿದೆ’ ಎಂದು ಎಸ್‌ಪಿ ವಿಕಾಶ್ ಕುಮಾರ್ ತಿಳಿಸಿದ್ದಾರೆ.
ಭಾರತೀಯ ನ್ಯಾಯ ಸಂಹಿತೆ, ಗಣಿ ಮತ್ತು ಖನಿಜಗಳು (ಅಭಿವೃದ್ಧಿ ಮತ್ತು ನಿಯಂತ್ರಣ) ಕಾಯ್ದೆ ಮತ್ತು ಸ್ಫೋಟಕ ವಸ್ತುಗಳ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಖ್ಲೈಹರಿಯತ್ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಾಗಿದೆ. ಘಟನೆ ಸಂಬಂಧ ಫಾರ್ಮೆ ಚಿರ್ಮಾಂಗ್ (36) ಮತ್ತು ಶಮೇಹಿ ವಾರ್ (42) ಎಂಬುವರನ್ನು ಬಂಧಿಸಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.