ADVERTISEMENT

ಕೆನೆಪದರ: ವಿಪಕ್ಷಗಳಿಂದ ಗೊಂದಲ ಸೃಷ್ಟಿ ಯತ್ನ: ಅರ್ಜುನ್ ರಾಮ್‌ ಮೇಘವಾಲ್

ಪಿಟಿಐ
Published 11 ಆಗಸ್ಟ್ 2024, 14:08 IST
Last Updated 11 ಆಗಸ್ಟ್ 2024, 14:08 IST
<div class="paragraphs"><p>ಅರ್ಜುನ್ ರಾಮ್‌ ಮೇಘವಾಲ್</p></div>

ಅರ್ಜುನ್ ರಾಮ್‌ ಮೇಘವಾಲ್

   

ನವದೆಹಲಿ: ಎಸ್‌ಸಿ, ಎಸ್‌ಟಿಗಳಿರುವ ಮೀಸಲಾತಿಯಲ್ಲಿ ಕೆನೆಪದರ ಕುರಿತು ಸುಪ್ರೀಂ ಕೋರ್ಟ್‌ನ ಟಿಪ್ಪಣಿಗೆ ಸಂಬಂಧಿಸಿ ವಿರೋಧ ಪಕ್ಷಗಳು ಜನರಲ್ಲಿ ಗೊಂದಲ ಸೃಷ್ಟಿಸುತ್ತಿವೆ ಎಂದು ಕಾನೂನು ಸಚಿವ ಅರ್ಜುನ್‌ರಾಮ್ ಮೇಘವಾಲ್‌ ಆರೋಪಿಸಿದ್ದಾರೆ.

‘ಪಿಟಿಐ ವಿಡಿಯೊಸ್‌’ಗೆ ಸಂದರ್ಶನ ನೀಡಿರುವ ಅವರು, ‘ಡಾ.ಬಿ.ಆರ್‌.ಅಂಬೇಡ್ಕರ್‌ ರಚಿಸಿರುವ ಸಂವಿಧಾನದಡಿ ನೀಡಲಾಗಿರುವ ಮೀಸಲಾತಿಯಲ್ಲಿ ಕೆನೆಪದರಕ್ಕೆ ಅವಕಾಶ ಇಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.

ADVERTISEMENT

‘ಕೆನೆಪದರ ಕುರಿತು ಸುಪ್ರೀಂ ಕೋರ್ಟ್‌ ತನ್ನ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ ಎಂಬುದು ವಿರೋಧ ಪಕ್ಷಗಳಿಗೂ ಗೊತ್ತಿದೆ. ಆದಾಗ್ಯೂ ಅವು ಜನರಲ್ಲಿ ಗೊಂದಲ ಸೃಷ್ಟಿಸಲು ಯತ್ನಿಸುತ್ತಿವೆ’ ಎಂದೂ ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.