ADVERTISEMENT

ವಿಶೇಷ ಸ್ಥಾನಮಾನ ಇಲ್ಲವಾಗಿಸುವ ಯತ್ನ: ಮೆಹಬೂಬಾ

ಜಮ್ಮು– ಕಾಶ್ಮೀರ ಬ್ಯಾಂಕ್‌ ಸರ್ಕಾರಿ ಸ್ವಾಮ್ಯಕ್ಕೆ

ಪಿಟಿಐ
Published 24 ನವೆಂಬರ್ 2018, 12:44 IST
Last Updated 24 ನವೆಂಬರ್ 2018, 12:44 IST
ಮೆಹಬೂಬಾ ಮುಫ್ತಿ
ಮೆಹಬೂಬಾ ಮುಫ್ತಿ   

ಶ್ರೀನಗರ: ‘ಜಮ್ಮು ಮತ್ತು ಕಾಶ್ಮೀರ ಬ್ಯಾಂಕ್‌ ಅನ್ನು ಸರ್ಕಾರಿ ಸ್ವಾಮ್ಯದ ಉದ್ದಿಮೆಯಾಗಿ ಪರಿಗಣಿಸುವ ನಿರ್ಧಾರ ಕೈಗೊಂಡಿರುವುದು, ರಾಜ್ಯದ ವಿಶೇಷ ಸ್ಥಾನಮಾನವನ್ನುಇಲ್ಲವಾಗಿಸುವ ಯತ್ನದ ಭಾಗವಾಗಿ’ ಎಂದು ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಶನಿವಾರ ಆರೋಪಿಸಿದ್ದಾರೆ.

ರಾಜ್ಯಪಾಲರ ನೇತೃತ್ವದ ರಾಜ್ಯ ಆಡಳಿತ ಮಂಡಳಿ ತೆಗೆದುಕೊಂಡಿರುವ ಈ ನಿರ್ಧಾರವನ್ನು ಕೂಡಲೇ ಹಿಂದೆಗೆದುಕೊಳ್ಳಬೇಕು ಎಂದೂ ಅವರು ಆಗ್ರಹಿಸಿದ್ದಾರೆ.

‘ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಲು ನಡೆಯುತ್ತಿರುವ ಪ್ರಯತ್ನಗಳನ್ನು ಮನಗಂಡು ಪಿಡಿಪಿಯು ನ್ಯಾಷನಲ್ ಕಾನ್ಫರೆನ್ಸ್ ಮತ್ತು ಕಾಂಗ್ರೆಸ್‌ ಜೊತೆ ಸೇರಿ ಸರ್ಕಾರ ರಚಿಸಲು ಮುಂದಾಗಿತ್ತು ಎಂದು ಮೆಹಬೂಬಾ ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.