ADVERTISEMENT

ಅಕ್ರಮ ಹಣ ವರ್ಗಾವಣೆ ಪ್ರಕರಣ: ವಿಚಾರಣೆಗೆ ಹಾಜರಾದ ಮೆಹಬೂಬಾ ಮುಫ್ತಿ

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2021, 8:28 IST
Last Updated 25 ಮಾರ್ಚ್ 2021, 8:28 IST
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಗುರುವಾರ ಶ್ರೀನಗರದಲ್ಲಿರುವ ಜಾರಿ ನಿರ್ದೇಶನಾಲಯ ಕಚೇರಿ ತಲುಪಿದ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಅಧ್ಯಕ್ಷೆ ಮೆಹಬೂಬ ಮುಫ್ತಿ.
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಗುರುವಾರ ಶ್ರೀನಗರದಲ್ಲಿರುವ ಜಾರಿ ನಿರ್ದೇಶನಾಲಯ ಕಚೇರಿ ತಲುಪಿದ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಅಧ್ಯಕ್ಷೆ ಮೆಹಬೂಬ ಮುಫ್ತಿ.   

ಶ್ರೀನಗರ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಅಧ್ಯಕ್ಷೆ ಮೆಹಬೂಬಾ ಮುಫ್ತಿ ಗುರುವಾರ ಇಲ್ಲಿನ ಜಾರಿ ನಿರ್ದೇಶನಾಲಯದ(ಇಡಿ) ಕಚೇರಿಯಲ್ಲಿ ವಿಚಾರಣೆಗೆ ಹಾಜರಾದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಳಿಗ್ಗೆ 11 ಗಂಟೆಗೆ ರಾಜ್‌ಬಾಗ್‌ನ ಜಾರಿ ನಿರ್ದೇಶನಾಲಯ ಕಚೇರಿ ತಲುಪಿದ ಮುಫ್ತಿ ಅವರು, ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾದರು.

ಇದಕ್ಕೂ ಮೊದಲು ಈ ಪ್ರಕರಣದ ವಿಚಾರಣೆಗಾಗಿ ದೆಹಲಿಗೆ ಬರುವಂತೆ ಇಡಿ ಅಧಿಕಾರಿಗಳು ಮೆಹಬೂಬಾ ಅವರಿಗೆ ನೋಟಿಸ್ ನೀಡಿದ್ದರು. ಆದರೆ, ದೆಹಲಿಯ ಬದಲು ಶ್ರೀನಗರದ ಕಚೇರಿಯಲ್ಲಿ ವಿಚಾರಣೆ ನಡೆಸುವಂತೆ ಕೋರಿ ಮುಫ್ತಿ ಅವರು ಮನವಿ ಸಲ್ಲಿಸಿದ್ದರು. ಮನವಿಯನ್ನು ಅಂಗೀಕರಿಸಿ, ಇಲ್ಲೇ ವಿಚಾರಣೆಗೆ ಅವಕಾಶ ಕಲ್ಪಿಸಲಾಯಿತು.

ADVERTISEMENT

ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಒಂದು ವರ್ಷಕ್ಕೂ ಹೆಚ್ಚು ಕಾಲ ಗೃಹಬಂಧನದಲ್ಲಿದ್ದು ಬಿಡುಗಡೆಯಾಗಿರುವ 61 ವರ್ಷದ ಮೆಹಬೂಬಾ ಮುಫ್ತಿ ಅವರಿಗೆ, ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಇಡಿ ಕಚೇರಿ ನೋಟಿಸ್ ನೀಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.