ಶ್ರೀನಗರ: ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರು, ಪಶ್ಚಿಮ ಬಂಗಾಳ, ತಮಿಳುನಾಡು ಹಾಗೂ ಕರ್ನಾಟಕದ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು, ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧದ ನಿಲುವಿಗೆ ಧನ್ಯವಾದ ಅರ್ಪಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, 'ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧದ ತತ್ವಬದ್ಧ ನಿಲುವಿಗೆ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸಿ ಮಮತಾ ಬ್ಯಾನರ್ಜಿ, ಎಂ.ಕೆ ಸ್ಟಾಲಿನ್ ಹಾಗೂ ಸಿದ್ದರಾಮಯ್ಯ ಅವರಿಗೆ ನಾನು ಪತ್ರ ಬರೆದಿದ್ದೇನೆ. ಆಧುನಿಕ ಭಾರತದಲ್ಲಿ ಭಿನ್ನಾಭಿಪ್ರಾಯವನ್ನು ಅಪರಾಧೀಕರಣಗೊಳಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಇಂತಹ ಸ್ಪಷ್ಟವಾದ ದನಿಗಳು ಹೆಚ್ಚು ಹುಮ್ಮಸ್ಸನ್ನು ತುಂಬುತ್ತವೆ' ಎಂದು ಹೇಳಿದ್ದಾರೆ.
'ದೇಶದ ಏಕೈಕ ಮುಸ್ಲಿಂ ಬಹುಸಂಖ್ಯಾತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದ ನಿವಾಸಿಗಳಾಗಿ, ಈ ಸಂದಿಗ್ದ ಸಮಯದಲ್ಲಿ ನಿಮ್ಮ ಅಚಲ ನಿಲುವಿನಿಂದ ನಾವು ಸಾಂತ್ವನ ಮತ್ತು ಸ್ಫೂರ್ತಿಯನ್ನು ಪಡೆದಿದ್ದೇವೆ' ಎಂದೂ ಮುಫ್ತಿ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.