ADVERTISEMENT

ಮಾನಸಿಕ ಅಸ್ವಸ್ಥೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ವಿಡಿಯೊ ಚಿತ್ರೀಕರಿಸಿದ ದುರುಳರು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 21 ಜನವರಿ 2023, 9:47 IST
Last Updated 21 ಜನವರಿ 2023, 9:47 IST
   

ಮುಂಬೈ: ಬಹಿರ್ದೆಸೆಗೆ ತೆರಳಿದ್ದ ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಮೂವರು ಅಪ್ರಾಪ್ತರು ಸಾಮೂಹಿಕ ಅತ್ಯಾಚಾರ ನಡೆಸಿ, ವಿಡಿಯೊ ಚಿತ್ರೀಕರಿಸಿರುವ ಘಟನೆ ಮುಂಬೈನ ಘಾಟ್ಕೊಪರ್‌ನಲ್ಲಿ ನಡೆದಿದೆ.

ಆರೋಪಿಗಳು ಬಾಲಕಿಯನ್ನು ಒತ್ತಾಯಪೂರ್ವಕವಾಗಿ ಶೌಚಾಲಯದ ಒಳಗೆ ಕರೆದೊಯ್ದು ಅತ್ಯಾಚಾರ ನಡೆಸಿ, ವಿಡಿಯೊ ಚಿತ್ರೀಕರಿಸಿದ್ದಾರೆ. ವಿಡಿಯೊವನ್ನು ಸಾಮಾಜಿಕ ಮಾಧ್ಯಮಗಳಿಗೂ ಅಪ್‌ಲೋಡ್ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದ್ದ ವಿಡಿಯೊವನ್ನು ಗಮನಿಸಿದ ಬಾಲಕಿಯ ಸಹೋದರ, ಪೋಷಕರಿಗೆ ಮಾಹಿತಿ ನೀಡಿದ್ದಾನೆ.

ADVERTISEMENT

ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 376, 376(ಜೆ), 323, 500 ಮತ್ತು ಪೊಕ್ಸೊ ಸೆಕ್ಷನ್ 4 ಹಾಗೂ ಐಟಿ ಕಾಯ್ದೆ ಸೆಕ್ಷನ್ 66(ಇ), 67(ಬಿ) ಅಡಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.