ADVERTISEMENT

23 ವರ್ಷದ ಮಾನಸಿಕ ಅಸ್ವಸ್ಥೆ ಮೇಲೆ ಮೂವರಿಂದ ಸಾಮೂಹಿಕ ಅತ್ಯಾಚಾರ

​ಪ್ರಜಾವಾಣಿ ವಾರ್ತೆ
Published 24 ಮಾರ್ಚ್ 2021, 11:50 IST
Last Updated 24 ಮಾರ್ಚ್ 2021, 11:50 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಉದಯಪುರ: ರಾಜಸ್ಥಾನದ ಉದಯಪುರ ಜಿಲ್ಲೆಯಲ್ಲಿ ಮಾನಸಿಕ ಅಸ್ವಸ್ಥೆಯಾಗಿದ್ದ 23 ವರ್ಷದ ಯುವತಿಯ ಮೇಲೆ ಮೂವರು ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಉದಯಪುರ ನಗರದಿಂದ 35 ಕಿ.ಮೀ ದೂರದಲ್ಲಿರುವ ಗೊಗುಂಡದಲ್ಲಿರುವ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಸಂಜೆ ಯುವತಿಯ ಕುಟುಂಬ ನೀಡಿರುವ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೋಟಾರ್ ಸೈಕಲ್‌ನಲ್ಲಿ ಬಂದ ಮೂವರು ಯುವತಿಯನ್ನು ಅಪಹರಿಸಿ, ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಭಾನುವಾರ ಸಂಜೆ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಯುವತಿಗೆ ವೈದ್ಯಕೀಯ ಪರೀಕ್ಷೆಯನ್ನು ನಡೆಸಲಾಗಿದ್ದು, ಅಪರಾಧಿಗಳನ್ನು ಗುರುತಿಸಲು ಮತ್ತು ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.