ADVERTISEMENT

ಮುಂದಿನ ಮೂರು ದಿನಗಳ ಕಾಲ ಆಂಧ್ರದಲ್ಲಿ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಪಿಟಿಐ
Published 28 ನವೆಂಬರ್ 2023, 11:09 IST
Last Updated 28 ನವೆಂಬರ್ 2023, 11:09 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಅಮರಾವತಿ: ಮುಂದಿನ ಮೂರು ದಿನಗಳ ಕಾಲ ಆಂಧ್ರಪ್ರದೇಶದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ರಾಜ್ಯದ ರಾಯಲ್‌ಸೀಮಾ ಪ್ರಾಂತ್ಯ ಹಾಗೂ ಆಂಧ್ರದ ಕರಾವಳಿ ಪ್ರದೇಶದ ಸುತ್ತಮುತ್ತ ಬುಧವಾರ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇದೇ ಪರಿಸ್ಥಿತಿ ಗುರುವಾರವೂ ಮುಂದುವರಿಯಲಿದೆ ಎಂದೆನ್ನಲಾಗಿದೆ.

ADVERTISEMENT

ಅಂಡಮಾನ್‌ನ ದಕ್ಷಿಣ ಭಾಗದ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮ ಮಳೆ ಸಾಧ್ಯತೆ ದಟ್ಟವಾಗಿದೆ. ಬಂಗಾಳ ಕೊಲ್ಲಿಯ ಆಗ್ನೇಯ ಭಾಗದಲ್ಲಿ ಉಂಟಾದ ಒತ್ತಡದ ಪರಿಣಾಮ ಪಶ್ಚಿಮ ಹಾಗೂ ವಾಯವ್ಯ ದಿಕ್ಕಿನೆಡೆಗೆ ಮೋಡಗಳು ಸಾಗುತ್ತಿವೆ. ಇದೇ ಪರಿಸ್ಥಿತಿ ನ. 30ರವರೆಗೂ ಇರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಾಗೆಯೇ ಆಂಧ್ರದ ಕರಾವಳಿ ಹಾಗೂ ರಾಯಲ್‌ಸೀಮಾ ಪ್ರದೇಶದಲ್ಲಿ ಡಿ. 4 ರಿಂದ 6ರವರೆಗೆ ಭಾರೀ ಮಳೆಯಾಗಲಿದೆ. ಮುಂದಿನ 48 ಗಂಟೆಗಳಲ್ಲಿ ಬಂಗಾಳ ಕೊಲ್ಲಿಯ ಆಗ್ನೇಯ ಭಾಗದಲ್ಲಿ ಚಂಡಮಾರುತ ಗಂಭೀರ ಸ್ವರೂಪ ಪಡೆದುಕೊಳ್ಳಲಿದೆ ಎಂದು ತಮ್ಮ ವರದಿಯಲ್ಲಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.