
ಪಿಟಿಐ
ಐಜ್ವಾಲ್: ಪೂರ್ವ ಮಿಜೋರಾಂನ ಚಂಫೈ ಜಿಲ್ಲೆಯಲ್ಲಿ ₹13.33 ಕೋಟಿ ಮೌಲ್ಯದ ಮೆಥಂಫೆಟಮೈನ್ ಮಾತ್ರೆಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಸ್ಸಾಂ ರೈಫಲ್ಸ್ ಬುಧವಾರ ತಿಳಿಸಿದೆ.
ನಿಖರ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿ, ಮ್ಯಾನ್ಮಾರ್‌ನ ವ್ಯಕ್ತಿಯೊಬ್ಬರನ್ನು ಮಂಗಳವಾರ ಬಂಧಿಸಲಾಗಿದೆ ಮತ್ತು ಆತನ ಬಳಿಯಿದ್ದ 4.4 ಕೆ.ಜಿ ನಿಷೇಧಿತ ಮೆಥಂಫೆಟಮೈನ್ ಮಾತ್ರೆಗಳನ್ನು ವಶಕ್ಕೆ ಪಡೆಯಲಾಗಿದೆ.
ಹೆಚ್ಚಿನ ತನಿಖೆಗಾಗಿ ಮತ್ತು ಕಾನೂನು ಕ್ರಮಕ್ಕಾಗಿ ಆರೋಪಿಯನ್ನು ಅಬಕಾರಿ ಮತ್ತು ಮಾದಕ ವಸ್ತು ಇಲಾಖೆ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.