
ಪ್ರಜಾವಾಣಿ ವಾರ್ತೆ
ತಿರುವನಂತಪುರ: ‘ಮೆಟ್ರೊ ಮ್ಯಾನ್’ ಎಂದೇ ಖ್ಯಾತರಾಗಿರುವ ಇ.ಶ್ರೀಧರನ್ ಅವರು ಸಕ್ರಿಯ ರಾಜಕಾರಣದಿಂದ ದೂರವಿರಲು ನಿರ್ಧರಿಸಿದ್ದಾರೆ.
ಶ್ರೀಧರನ್ ಅವರು ಈ ವರ್ಷದ ಏಪ್ರಿಲ್‌ನಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕೇರಳದ ಪಾಲಕ್ಕಾಡ್‌ನಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದರು.
‘ಇನ್ನು ಮುಂದೆ ಸಕ್ರಿಯ ರಾಜಕಾರಣದಲ್ಲಿ ತೊಡಗುವುದಿಲ್ಲ. ರಾಜಕೀಯದಲ್ಲಿ ತೊಡಗಿಸಿಕೊಳ್ಳದೆ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳುವೆ.ಕೇವಲ ಅಧಿಕಾರಶಾಹಿಯಾಗಿ ರಾಜಕೀಯಕ್ಕೆ ಸೇರಿದ್ದೆ. ಈಗ ನನಗೆ ವಯಸ್ಸಾಗಿದೆ. ಹೀಗಾಗಿ ಇನ್ನು ಮುಂದೆ ಸಕ್ರಿಯ ರಾಜಕಾರಣದಲ್ಲಿ ಇರುವುದು ಸೂಕ್ತವಲ್ಲ’ ಎಂದು 89 ವರ್ಷ ವಯಸ್ಸಿನ ಶ್ರೀಧರನ್ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.