ADVERTISEMENT

ಅನ್‌ಲಾಕ್‌-4: ಸೆಪ್ಟಂಬರ್ 1ರಿಂದ ಮೆಟ್ರೋ ರೈಲು ಸೇವೆ ಪುನರಾರಂಭ ಸಾಧ್ಯತೆ

ಪಿಟಿಐ
Published 24 ಆಗಸ್ಟ್ 2020, 14:03 IST
Last Updated 24 ಆಗಸ್ಟ್ 2020, 14:03 IST
ದೆಹಲಿ ಮೆಟ್ರೋ (ಸಂಗ್ರಹ ಚಿತ್ರ)
ದೆಹಲಿ ಮೆಟ್ರೋ (ಸಂಗ್ರಹ ಚಿತ್ರ)   

ನವದೆಹಲಿ: ಸೆಪ್ಟೆಂಬರ್ 1 ರಿಂದ ಮೆಟ್ರೋ ರೈಲು ಸೇವೆಗಳು ಪುನರಾರಂಭಗೊಳ್ಳಬಹುದು. ಆದರೆ, ಶಾಲೆಗಳನ್ನು ಪುನಃ ತೆರೆಯುವ ಸಾಧ್ಯತೆ ಇಲ್ಲ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಈವರೆಗೂ ತೆರೆಯಲು ಅನುಮತಿ ದೊರಕಿರದ ಬಾರ್‌ಗಳಲ್ಲಿ ಮದ್ಯವನ್ನು ತೆಗೆದುಕೊಂಡು ಹೋಗಲು ಕೌಂಟರ್‌ಗಳಲ್ಲಿ ಮಾರಾಟಕ್ಕೆ ಅನುಮತಿ ದೊರಕಬಹುದು ಎನ್ನಲಾಗಿದೆ.

ಕೊರೊನಾ ವೈರಸ್‌ ಪ್ರೇರಿತ ಲಾಕ್‌ಡೌನ್‌ನಿಂದ ಒಂದೊಂದೇ ಸೇವೆಗಳಪುನರಾರಂಭದಲ್ಲಿ 'ಅನ್‌ಲಾಕ್-4' ಹಂತದಲ್ಲಿ ಸೆಪ್ಟೆಂಬರ್ 1 ರಿಂದ ಮೆಟ್ರೊ ರೈಲು ಸೇವೆಗಳ ಪುನರಾರಂಭಕ್ಕೆ ಅನುಮತಿ ನೀಡಬಹುದು. ಆದರೆ ತಕ್ಷಣ ಶಾಲೆಗಳು ಮತ್ತು ಕಾಲೇಜುಗಳನ್ನು ಪುನಃ ತೆರೆಯಲಾಗುವುದಿಲ್ಲ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ADVERTISEMENT

ಈ ಕುರಿತುಬಿಎಂಆರ್ ಸಿಎಲ್ ಅಧಿಕಾರಿಗಳು ದೃಢಪಡಿಸಿಲ್ಲ. ಕೇಂದ್ರ ಸರ್ಕಾರದಿಂದ ಈವರೆಗೆ ಯಾವುದೇ ಸೂಚನೆ ಬಂದಿಲ್ಲ ಎಂದು ಹೇಳಿದ್ದಾರೆ.

ದೇಶದಲ್ಲಿ ಈವರೆಗೂ 31 ಲಕ್ಷಕ್ಕೂ ಹೆಚ್ಚು ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿದ್ದು, ಸೋಂಕು ಹರಡುವಿಕೆಯನ್ನು ತಪ್ಪಿಸಲು ಮಾರ್ಚ್ ಅಂತ್ಯದಲ್ಲಿ ಮೆಟ್ರೊ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.