
ನರೇಗಾ ಕಾಮಗಾರಿ ದೃಶ್ಯ
ಪ್ರಾತಿನಿಧಿಕ ಚಿತ್ರ
ನವದೆಹಲಿ: ಕೇಂದ್ರ ಸಚಿವ ಸಂಪುಟವು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆಯನ್ನು (ಮನರೇಗಾ) ‘ಪೂಜ್ಯ ಬಾಪು ಗ್ರಾಮೀಣ ರೋಜಗಾರ್ ಯೋಜನೆ’ (ಪಿಬಿಜಿಆರ್‌ವೈ) ಎಂದು ಮರು ನಾಮಕರಣ ಮಾಡಲು ಶುಕ್ರವಾರ ಅನುಮೋದನೆ ನೀಡಿದೆ.
ಗ್ರಾಮೀಣ ಭಾಗದ ಬಡಜನರಿಗೆ ವರ್ಷದಲ್ಲಿ 125 ದಿನಗಳು ಕೆಲಸವನ್ನು ಖಾತರಿಪಡಿಸಲು ಸರ್ಕಾರ ‘ಪೂಜ್ಯ ಬಾಪು ಗ್ರಾಮೀಣ ರೋಜಗಾರ್ ಖಾತರಿ’ ಮಸೂದೆಯನ್ನು ತರಲಿದೆ. ಕನಿಷ್ಠ ವೇತನವನ್ನು ದಿನಕ್ಕೆ ₹240ಕ್ಕೆ ಪರಿಷ್ಕರಿಸುವ ಪ್ರಸ್ತಾವವನ್ನೂ ಇದು ಒಳಗೊಂಡಿದೆ. ಈ ಯೋಜನೆಗಾಗಿ ಸರ್ಕಾರ ₹1.51 ಲಕ್ಷ ಕೋಟಿ ಹಂಚಿಕೆ ಮಾಡಲಿದೆ ಎಂದು ಮೂಲಗಳು ತಿಳಿಸಿವೆ.
ಈ ಯೋಜನೆಯನ್ನು 2005ರಲ್ಲಿ ‘ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ’ ಎಂದು ಪರಿಚಯಿಸಲಾಯಿತು. ನಂತರ 2009ರಲ್ಲಿ ‘ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ’ ಎಂದು ಮರು ನಾಮಕರಣ ಮಾಡಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.