ನವದೆಹಲಿ: ಬೆಟ್ಟಿಂಗ್ ವೆಬ್‌ಸೈಟ್‌ಗಳಿಗೆ ಸಂಬಂಧಿಸಿದ ಜಾಹೀರಾತುಗಳನ್ನು ಪ್ರಕಟಿಸದಂತೆ ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯವು ಗುರುವಾರ ಮಾಧ್ಯಮ ಸಂಸ್ಥೆಗಳಿಗೆ ಎಚ್ಚರಿಕೆ ನೀಡಿದೆ.
ಕೆಲ ದಿನಗಳ ಹಿಂದೆ ಮುಖ್ಯವಾಹಿನಿಗೆ ಸೇರಿದ ಇಂಗ್ಲಿಷ್ ಮತ್ತು ಹಿಂದಿ ದಿನಪತ್ರಿಕೆಗಳು ಈ ಬಗೆಯ ಜಾಹೀರಾತು ಪ್ರಕಟಿಸಿದ್ದವು. ಇದನ್ನು ಗಂಭೀರವಾಗಿ ಪರಿಗಣಿಸಿರುವ ಸಚಿವಾಲಯವು ಅಧಿಕೃತ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದೆ.
‘ಬೆಟ್ಟಿಂಗ್ ವೆಬ್‌ಸೈಟ್‌ಗಳಿಗೆ ಸಂಬಂಧಿಸಿದ ಜಾಹೀರಾತು ಹಾಗೂ ಅವುಗಳ ಕುರಿತಾದ ಪ್ರಚಾರದ ವಸ್ತುಗಳನ್ನು ಪ್ರಕಟಿಸದಂತೆ ದಿನಪತ್ರಿಕೆ, ಸುದ್ದಿ ವಾಹಿನಿ, ಆನ್‌ಲೈನ್ ಸುದ್ದಿ ಮಾಧ್ಯಮಗಳಿಗೆ ಸೂಚಿಸಲಾಗಿದೆ. ಇದನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಬೇಕು’ ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.