ADVERTISEMENT

ಪರಿಶಿಷ್ಟ ಜನಾಂಗದ ಬಾಲಕನ ಮೇಲೆ ದೌರ್ಜನ್ಯ: ಮನನೊಂದ ಕಾಂಗ್ರೆಸ್ ಶಾಸಕ ರಾಜೀನಾಮೆ  

ಪಿಟಿಐ
Published 15 ಆಗಸ್ಟ್ 2022, 14:03 IST
Last Updated 15 ಆಗಸ್ಟ್ 2022, 14:03 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಜೈಪುರ: ಪರಿಶಿಷ್ಟರ ಮೇಲಿನ ದೌರ್ಜನ್ಯ ಪ್ರಕರಣಗಳಿಂದ ಮನನೊಂದಿರುವ ಕಾಂಗ್ರೆಸ್ ಶಾಸಕ ಪನಾ ಚಂದ್ ಮೇಘವಾಲ್ ಸೋಮವಾರ ತಮ್ಮ ರಾಜೀನಾಮೆಯನ್ನು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರಿಗೆ ಕಳುಹಿಸಿದ್ದಾರೆ.

‘ಸಮುದಾಯದ ಹಕ್ಕುಗಳನ್ನು ರಕ್ಷಿಸಲು ಸಾಧ್ಯವಾಗದಿದ್ದರೆ ಶಾಸಕನಾಗಿ ಉಳಿಯುವ ಹಕ್ಕು ನನಗೆ ಇಲ್ಲ. ನನ್ನ ಆತ್ಮಸಾಕ್ಷಿಗೆ ಅನುಗುಣವಾಗಿಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಯಾವುದೇ ಸ್ಥಾನ ಇಲ್ಲದೆ ಸಮಾಜಕ್ಕೆ ಸೇವೆ ಸಲ್ಲಿಸುತ್ತೇನೆ’ ಎಂದು ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

‘75ನೇ ಸ್ವಾತಂತ್ರ್ಯ ಸಂಭ್ರಮದ ಸಂದರ್ಭದಲ್ಲೂ ದೇಶದಲ್ಲಿ ಪರಿಶಿಷ್ಟರು ಮತ್ತು ಶೋಷಿತ ವರ್ಗಗಳ ಮೇಲೆ ದೌರ್ಜನ್ಯ ನಡೆಯುತ್ತಲೇ ಇದೆ.ದೌರ್ಜನ್ಯ ನೋಡಿ ನೋವಾಗಿದೆ. ನನ್ನ ಸಮುದಾಯವನ್ನು ಹಿಂಸಿಸುತ್ತಿರುವ ರೀತಿಯನ್ನು ಪದಗಳಲ್ಲಿ ವ್ಯಕ್ತಪಡಿಸಲು ಸಾಧ್ಯವಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ADVERTISEMENT

ಶಾಲೆಯಲ್ಲಿ ಮಡಕೆ ನೀರು ಕುಡಿದ ಕಾರಣಕ್ಕೆ ಶಿಕ್ಷಕನಿಂದ ಹಲ್ಲೆಗೆ ಒಳಗಾಗಿದ್ದ ಪರಿಶಿಷ್ಟ ಜನಾಂಗದ ಬಾಲಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದನು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.