ADVERTISEMENT

ಮಿಗ್ ವಿಮಾನ ಪತನ

​ಪ್ರಜಾವಾಣಿ ವಾರ್ತೆ
Published 18 ಜುಲೈ 2018, 17:05 IST
Last Updated 18 ಜುಲೈ 2018, 17:05 IST

ಶಿಮ್ಲಾ (ಪಿಟಿಐ): ಹಿಮಾಚಲ ಪ್ರದೇಶದ ಕಾಂಗ್ರಾ ಜಿಲ್ಲೆಯಲ್ಲಿ ವಾಯುಪಡೆಯ ಮಿಗ್–21ಯುದ್ಧವಿಮಾನ ಬುಧವಾರ ಪತನವಾಗಿದೆ. ಪೈಲಟ್‌ ಬಗ್ಗೆ ಮಾಹಿತಿ ಗೊತ್ತಾಗಿಲ್ಲ.

ವಾಯುಪಡೆಯ ಎರಡು ಹೆಲಿಕಾಪ್ಟರ್‌ಗಳು ಸ್ಥಳಕ್ಕೆ ಧಾವಿಸಿದವು. ಅಧಿಕಾರಿಗಳು ಪರಿಶೀಲನೆ ನಡೆಸಿದರು.

ಪಠಾಣ್‌ಕೋಟ್ ವಾಯುನೆಲೆಯಿಂದ ಹೊರಟಿದ್ದ ವಿಮಾನ ಮೆಹ್ರಪಲ್ಲಿ ಗ್ರಾಮದಲ್ಲಿ ಅವಘಡಕ್ಕೆ ತುತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.