ಶ್ರೀನಗರ: ಉತ್ತರ ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ವಲಸೆ ಕಾರ್ಮಿಕರೊಬ್ಬರನ್ನು ಉಗ್ರರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ಹೇಳಿದ್ದಾರೆ.
ಬಿಹಾರದ ಮಾಧೇಪುರದ ಮೊಹಮ್ಮದ್ ಅಮ್ರೇಜ್ ಮೃತ ಕಾರ್ಮಿಕ. ಉಗ್ರರ ಗುಂಡೇಟಿನಿಂದ ಗಾಯಗೊಂಡಿದ್ದ ಇವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಕಳೆದ ವಾರ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಬಿಹಾರದ ವಲಸೆ ಕಾರ್ಮಿಕರೊಬ್ಬರು ಮೃತಪಟ್ಟು, ಇತರ ಇಬ್ಬರು ಗಾಯಗೊಂಡಿದ್ದರು.
ಕಾಶ್ಮೀರದಲ್ಲಿ ಕಳೆದ ಅಕ್ಟೋಬರ್ ತಿಂಗಳಿನಿಂದ ಉಗ್ರರು ವಲಸೆ ಕಾರ್ಮಿಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.