ADVERTISEMENT

ಗುಜರಾತ್‌ನ ಕಛ್‌ ಜಿಲ್ಲೆಯಲ್ಲಿ ಲಘು ಭೂಕಂಪ

ಪಿಟಿಐ
Published 8 ಮಾರ್ಚ್ 2021, 6:01 IST
Last Updated 8 ಮಾರ್ಚ್ 2021, 6:01 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಅಹಮದಾಬಾದ್‌: ಗುಜರಾತ್‌ನ ಕಛ್‌ ಜಿಲ್ಲೆಯಲ್ಲಿ ಸೋಮವಾರ ಬೆಳಿಗ್ಗೆ ರಿಕ್ಟರ್‌ ಮಾಪಕದಲ್ಲಿ 3.2 ತೀವ್ರತೆಯ ಲಘು ಭೂಕಂಪ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಾಂಧಿನಗರದ ಇನ್ಸ್ಟಿಟ್ಯೂಟ್ ಆಫ್ ಸಿಸ್ಮಲಾಜಿಕಲ್ ರಿಸರ್ಚ್ (ಐಎಸ್ಆರ್) ನ ಜಾಲತಾಣದಲ್ಲಿ ಪ್ರಕಟವಾಗಿರುವ ಮಾಹಿತಿ ಪ್ರಕಾರ, ಕಛ್‌ ಜಿಲ್ಲೆಯ ದುದೈನ ಪೂರ್ವ-ಈಶಾನ್ಯಕ್ಕೆ 13 ಕಿ.ಮೀ ದೂರದಲ್ಲಿ ಬೆಳಿಗ್ಗೆ 7.42 ಭೂಕಂಪ ಸಂಭವಿಸಿದೆ. 18.6 ಕಿ.ಮೀ ಆಳದಲ್ಲಿ ಭೂಕಂಪನದ ಕೇಂದ್ರಬಿಂದು ಇದೆ ಎಂದು ಐಎಸ್ಆರ್ ತಿಳಿಸಿದೆ.

ಭೂಕಂಪದಿಂದಾಗಿ ಯಾವುದೇ ಸಾವು–ನೋವು ಸಂಭವಿಸಿದ್ದು, ಆಸ್ತಿಪಾಸ್ತಿಗೆ ಹಾನಿಯಾದ ವರದಿಯಾಗಿಲ್ಲ ಎಂದು ಜಿಲ್ಲಾಡಳಿತ ತಿಳಿಸಿದೆ.

ADVERTISEMENT

ಕಛ್‌ ಅತ್ಯಂತ ಅಪಾಯಕಾರಿ ಭೂಕಂಪನ ವಲಯದಲ್ಲಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಅಧಿಕಾರಿಗಳು ತಿಳಿಸಿದ್ದಾರೆ. ಈ ಜಿಲ್ಲೆ 2001ರ ಜನವರಿಯಲ್ಲಿ ಭೀಕರ ಭೂಕಂಪನಕ್ಕೆ ಸಾಕ್ಷಿಯಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.