ADVERTISEMENT

ಕೇರಳ: ಕಾಸರಗೋಡಿನ ಎತ್ತರದ ಪ್ರದೇಶಗಳಲ್ಲಿ ಲಘು ಭೂಕಂಪನ

ಪಿಟಿಐ
Published 8 ಫೆಬ್ರುವರಿ 2025, 7:49 IST
Last Updated 8 ಫೆಬ್ರುವರಿ 2025, 7:49 IST
<div class="paragraphs"><p>ಸಾಂಕೇತಿಕ ಚಿತ್ರ</p></div>

ಸಾಂಕೇತಿಕ ಚಿತ್ರ

   

ಕಾಸರಗೋಡು: ಕೇರಳದ ಉತ್ತರ ಕಾಸರಗೋಡು ಜಿಲ್ಲೆಯ ಎತ್ತರದ ಪ್ರದೇಶಗಳಲ್ಲಿ ಇಂದು (ಶನಿವಾರ) ಬೆಳಗಿನ ಜಾವ ಲಘು ಭೂಕಂಪನದ ಅನುಭವವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾಲೋಮ್, ರಾಜಪುರಂ, ಕೊನ್ನಕ್ಕಾಡ್ ಮತ್ತು ಹತ್ತಿರದ ಪ್ರದೇಶಗಳಲ್ಲಿ ಕೆಲವು ಸೆಕೆಂಡುಗಳ ಕಾಲ ಭೂಮಿ ಕಂಪಿಸಿದ ಅನುಭವವಾಯಿತು ಎಂದು ಗ್ರಾಮಸ್ಥರನ್ನು ಉಲ್ಲೇಖಿಸಿ ವೆಲ್ಲರಿಕ್ಕುಂಡು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಈ ಪ್ರದೇಶಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ ಹಾಗೂ ವಿಚಿತ್ರ ಶಬ್ದ ಕೇಳಿಬಂದಿದೆ ಎಂದು ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜಿಲ್ಲಾಡಳಿತದ ಅಧಿಕಾರಿಗಳು ಶೀಘ್ರದಲ್ಲೇ ಈ ಪ್ರದೇಶಗಳಿಗೆ ಭೇಟಿ ನೀಡಲಿದ್ದು, ಪರಿಶೀಲನೆ ನಡೆಸಲಿದ್ದಾರೆ. ಬಳಿಕ ಅವರಿಂದ ಹೆಚ್ಚಿನ ಮಾಹಿತಿ ಪಡೆಯಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.