ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಉಗ್ರರ ಸಹಾಯಕನೊಬ್ಬನನ್ನು ಭದ್ರತಾ ಪಡೆ ಸಿಬ್ಬಂದಿ ಬಂಧಿಸಿದ್ದು, ಆತನಿಂದ ಒಂದು ಗ್ರೆನೇಡ್ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದರು.
ಖಚಿತ ಮಾಹಿತಿ ಮೇಲೆ, ದಕ್ಷಿಣ ಕಾಶ್ಮೀರದ ತ್ರಾಲ್ ಪ್ರದೇಶದಲ್ಲಿರುವ ಮನೆಯೊಂದನ್ನು ಸಿಬ್ಬಂದಿ ಶೋಧ ನಡೆಸಿದ ಸಂದರ್ಭದಲ್ಲಿ, ಚೀನಾ ನಿರ್ಮಿತ ಗ್ರೆನೇಡ್ ಒಂದು ಪ್ಲಾಸ್ಟಿಕ್ ಡಬ್ಬಿಯಲ್ಲಿ ಪತ್ತೆಯಾಗಿದೆ. ಮನೆಯ ಮಾಲೀಕ ಅಮಿರ್ ಅಶ್ರಫ್ ಖಾನ್ ಎಂಬಾತನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ವಕ್ತಾರರೊಬ್ಬರು ತಿಳಿಸಿದರು. ಖಾನ್ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಅವರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.