ADVERTISEMENT

ಪುಲ್ವಾಮಾದಲ್ಲಿ ಉಗ್ರನ ಹತ್ಯೆ

ಪಿಟಿಐ
Published 26 ಜೂನ್ 2019, 19:45 IST
Last Updated 26 ಜೂನ್ 2019, 19:45 IST

ಶ್ರೀನಗರ(ಪಿಟಿಐ): ಜಮ್ಮು ಕಾಶ್ಮೀರದಪುಲ್ವಾಮಾ ಜಿಲ್ಲೆಯ ಟ್ರಾಲ್‌ ಅರಣ್ಯದಲ್ಲಿ ಬುಧವಾರ ಭದ್ರತಾಪಡೆ ಸಿಬ್ಬಂದಿ ಉಗ್ರನೊಬ್ಬನನ್ನು ಹೊಡೆದುರುಳಿಸಿದ್ದಾರೆ. ಉಗ್ರನ ಗುರುತು ಇನ್ನಷ್ಟೇ ಪತ್ತೆ ಹಚ್ಚಬೇಕಾಗಿದೆ.

ಟ್ರಾಲ್‌ ಅರಣ್ಯದ ಬ್ರನ್‌ಪತ್ರಿ ಪ್ರದೇಶದಲ್ಲಿ ಉಗ್ರರು ಅಡಗಿರುವ ನಿಖರ ಮಾಹಿತಿ ಪಡೆದಿದ್ದ ಭದ್ರತಾ ಪಡೆ ಬುಧವಾರ ಮುಂಜಾನೆ ಕಾರ್ಯಾಚರಣೆಗೆ ಇಳಿದಿತ್ತು. ‘ಈ ಸಂದರ್ಭದಲ್ಲಿ ಉಗ್ರರು ಮತ್ತು ಭದ್ರತಾಪಡೆ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಘಟನೆಯಲ್ಲಿ ಒಬ್ಬ ಉಗ್ರ ಮೃತಪಟ್ಟಿದ್ದಾನೆ. ಭದ್ರತಾ ಪಡೆ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ. ಉಗ್ರ ಯಾವ ಸಂಘಟನೆಯವ ಎನ್ನುವುದನ್ನು ಖಚಿತಪಡಿಸಿಕೊಳ್ಳಲಾಗುತ್ತಿದೆ ’ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT