ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಗುರುವಾರ ನಡೆಸಿದ ಎನ್ಕೌಂಟರ್ನಲ್ಲಿ ಉಗ್ರನೊಬ್ಬನನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಚಾವಲ್ಗಾಂ ಪ್ರದೇಶದಲ್ಲಿ ಭಯೋತ್ಪಾದಕರು ಅವಿತಿರುವ ಮಾಹಿತಿ ಅರಿತ ಭದ್ರತಾ ಪಡೆಗಳು ಶೋಧ ಕಾರ್ಯ ನಡೆಸಿವೆ. ಈ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಯೋಧರು ಪ್ರತಿದಾಳಿ ನಡೆಸಿ ಉಗ್ರನನ್ನು ಹತ್ಯೆ ಮಾಡಿದ್ದಾರೆ ಎಂದು ಹೇಳಿದ್ದಾರೆ.
ಮೃತ ಉಗ್ರನ ಗುರುತು ಪತ್ತೆಯಾಗಿಲ್ಲ. ಕಾರ್ಯಾಚರಣೆ ಮುಂದುವರಿದಿದೆ ಎಂದೂ ತಿಳಿಸಿದ್ದಾರೆ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.