ADVERTISEMENT

ಶೋಪಿಯಾನ್‌ನಲ್ಲಿ ಎನ್‌ಕೌಂಟರ್: ಓರ್ವ ಉಗ್ರ ಸಾವು, ಇಬ್ಬರು ಯೋಧರಿಗೆ ಗಾಯ

ಪಿಟಿಐ
Published 26 ಡಿಸೆಂಬರ್ 2020, 4:07 IST
Last Updated 26 ಡಿಸೆಂಬರ್ 2020, 4:07 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಅಪರಿಚಿತ ಉಗ್ರನೊಬ್ಬ ಮೃತಪಟ್ಟಿದ್ದು, ಇಬ್ಬರು ಯೋಧರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಉಗ್ರರು ಅಡಗಿರುವ ಖಚಿತ ಮಾಹಿತಿ ಲಭ್ಯವಾಗಿರುವ ಮೇರೆಗೆ ಭದ್ರತಾ ಪಡೆಗಳು ದಕ್ಷಿಣ ಕಾಶ್ಮೀರದ ಶೋಪಿಯಾನ್‌ನ ಕನಿಗಾಮ್ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ. ಭದ್ರತಾ ಪಡೆಗಳು ಶೋಧ ನಡೆಸುತ್ತಿರುವಾಗ ಅವರ ಮೇಲೆ ಉಗ್ರರು ಏಕಾಏಕಿ ಗುಂಡು ಹಾರಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದೇ ವೇಳೆ ಭದ್ರತಾ ಪಡೆಗಳು ಕೂಡ ಪ್ರತೀಕಾರ ತೀರಿಸಿಕೊಂಡವು, ಇದರ ಪರಿಣಾಮವಾಗಿ ಓರ್ವ ಉಗ್ರನನ್ನು ಎನ್‌ಕೌಂಟರ್ ಮಾಡಲಾಗಿದೆ. ಹತ್ಯೆಗೀಡಾದ ಉಗ್ರನ ಗುರುತು ಮತ್ತು ಆತ ಯಾವ ಗುಂಪಿಗೆ ಸೇರಿದ್ದಾನೆ ಎಂಬುದನ್ನು ಕಂಡುಹಿಡಿಯಲಾಗುತ್ತಿದೆ ಎಂದು ಅವರು ಹೇಳಿದರು.

ADVERTISEMENT

ಘಟನೆಯಲ್ಲಿ ಇಬ್ಬರು ಯೋಧರು ಗಾಯಗೊಂಡಿದ್ದು, ಅವರನ್ನು ಕೂಡಲೇ ಸೇನಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸದ್ಯ ಕಾರ್ಯಾಚರಣೆ ನಡೆಯುತ್ತಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.