ADVERTISEMENT

ಕುಲ್ಗಾಂನಲ್ಲಿ ಎನ್‌ಕೌಂಟರ್‌:ಭಯೋತ್ಪಾದಕ ಸಾವು

ಪಿಟಿಐ
Published 4 ಜುಲೈ 2020, 13:32 IST
Last Updated 4 ಜುಲೈ 2020, 13:32 IST
ಭಯೋತ್ಪಾದಕ
ಭಯೋತ್ಪಾದಕ   

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಶನಿವಾರ ನಡೆದ ಎನ್‌ಕೌಂಟರ್‌ನಲ್ಲಿ ಉಗ್ರಗಾಮಿಯೊಬ್ಬ ಮೃತಪಟ್ಟಿದ್ದು, ಭದ್ರತಾ ಪಡೆಯ ಒಬ್ಬ ಸಿಬ್ಬಂದಿ ಗಾಯಗೊಂಡಿದ್ದಾರೆ.

ದಕ್ಷಿಣ ಕಾಶ್ಮೀರದಲ್ಲಿರುವ ಕುಲ್ಗಾಂನ ಅರ‍್ರಾ ಎಂಬಲ್ಲಿ ಉಗ್ರರು ತಂಗಿರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ಭದ್ರತಾ ಪಡೆಗಳು ತಾಣವನ್ನು ಸುತ್ತುವರಿದು ಶೋಧ ಕಾರ್ಯಾಚರಣೆ ಆರಂಭಿಸಿದವು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಉಗ್ರಗಾಮಿಗಳು ಭದ್ರತಾ ಪಡೆಗಳ ಸಿಬ್ಬಂದಿಯತ್ತ ಗುಂಡುಹಾರಿಸಿದರು. ಯೋಧರ ಪ್ರತಿದಾಳಿಯಲ್ಲಿ ಒಬ್ಬ ಉಗ್ರ ಮೃತಪಟ್ಟಿದ್ದಾನೆ. ಗುಂಡಿನ ಕಾಳಗದಲ್ಲಿ ಸೇನಾಪಡೆ ಸಿಬ್ಬಂದಿಯೊಬ್ಬರು ಗಾಯಾಳಾಗಿದ್ದಾರೆ. ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ADVERTISEMENT

ಕಾರ್ಯಾಚರಣೆ ಮುಂದುವರಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.