ADVERTISEMENT

ಗಡಿಯೊಳಗೆ ನುಸುಳಲು ಯತ್ನಿಸಿದ ಉಗ್ರನ ಹತ್ಯೆ

ಪಿಟಿಐ
Published 8 ನವೆಂಬರ್ 2020, 7:10 IST
Last Updated 8 ನವೆಂಬರ್ 2020, 7:10 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಮಚಿಲ್‌ ಸೆಕ್ಟರ್‌ನ ಗಡಿ ನಿಯಂತ್ರಣ ರೇಖೆ ಬಳಿ ಉಗ್ರರು ಒಳನುಸುಳಲು ಯತ್ನಿಸಿದ್ದು, ಈ ವೇಳೆ ಉಗ್ರನೊಬ್ಬನನ್ನು ಹೊಡೆದುರಳಿಸಲಾಗಿದೆ ಎಂದು ರಕ್ಷಣಾ ಸಚಿವಾಲಯದ ವಕ್ತಾರ ಭಾನುವಾರ ತಿಳಿಸಿದರು.

‘ಗಡಿಭಾಗದ ಮೂಲಕ ಒಳನುಸುಳಲು ಪ್ರಯತ್ನಿಸುತ್ತಿದ್ದ ಉಗ್ರರನ್ನು ತಡೆಯುವಲ್ಲಿ ಗಸ್ತು ಪಡೆ ಸಫಲವಾಗಿದೆ’ ಎಂದು ಅವರು ಹೇಳಿದರು.

‘ಗಸ್ತು ಪಡೆಯು ಶನಿವಾರ ಮಧ್ಯರಾತ್ರಿ ಮಚಿಲ ಸೆಕ್ಟರ್‌ನ ಗಡಿ ಭಾಗದಲ್ಲಿ ಅನುಮಾನಾಸ್ಪದ ಚಟುವಟಿಕೆಯನ್ನು ಗಮನಿಸಿದೆ.ಈ ವೇಳೆ ಒಳನುಸುಳಲು ಯತ್ನಿಸುತ್ತಿದ್ದ ಉಗ್ರರು ಮತ್ತು ಗಸ್ತು ಪಡೆ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಒಬ್ಬ ಉಗ್ರ ಹತನಾಗಿದ್ದಾನೆ’ ಎಂದು ಕರ್ನಲ್‌ ಕಾಳಿಯ ಅವರು ಮಾಹಿತಿ ನೀಡಿದರು.

ADVERTISEMENT

‘ಘಟನಾ ಸ್ಥಳದಿಂದ ಎಕೆ ರೈಫಲ್‌, ಎರಡು ಬ್ಯಾಗಗಳನ್ನು ವಶಕ್ಕೆ ಪಡೆಯಲಾಗಿದೆ. ಇನ್ನಿತರ ಉಗ್ರರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ’ ಎಂದು ಅವರು ಹೇಳಿದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.