ಶ್ರೀನಗರ: ಇಲ್ಲಿನ ರಣ್ಬೀರ್ಗಡ ಬಳಿ ಶನಿವಾರ ಬೆಳಗಿನ ಜಾವ ನಡೆದಎನ್ಕೌಂಟರ್ನಲ್ಲಿ ಭದ್ರತಾ ಪಡೆಗಳು ಇಬ್ಬರು ಉಗ್ರರನ್ನು ಹೊಡೆದುರುಳಿಸಿವೆ.
ನಿಖರ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಶೋಧ ಕಾರ್ಯ ಕೈಗೊಂಡಿದ್ದವು. ಈ ವೇಳೆ ಉಗ್ರರು ದಾಳಿ ನಡೆಸಿದ್ದರಿಂದ ಭದ್ರತಾ ಪಡೆಗಳು ಪ್ರತಿ ದಾಳಿ ನಡೆಸಿದವು. ಈ ಸಂದರ್ಭದಲ್ಲಿ ಒಬ್ಬ ಉಗ್ರ ಹತನಾಗಿದ್ದಾನೆ. ಉಗ್ರರು ಯಾವ ಸಂಘಟನೆಗೆ ಸೇರಿದವರುಎಂಬುದನ್ನು ಪತ್ತೆ ಹಚ್ಚಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.