ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಸೇನಾ ಪಡೆಗಳು ಮಂಗಳವಾರ ನಡೆಸಿದ ಎನ್‌ಕೌಂಟರ್‌ನಲ್ಲಿ ಅಪರಿಚಿತ ಉಗ್ರನೊಬ್ಬ ಹತನಾಗಿದ್ದಾನೆ.
‘ಬಂಡಿಪೋರಾದ ಚಾಂದಜಿ ಪ್ರದೇಶದಲ್ಲಿ ಉಗ್ರರು ಅಡಗಿರುವ ನಿಖರ ಮಾಹಿತಿ ಮೇರೆಗೆ ಭದ್ರತಾ ಪಡೆ ಶೋಧ ಕಾರ್ಯಾಚರಣೆ ನಡೆಸಿತು. ಈ ಮೇಳೆ ಉಗ್ರರು ಮೊದಲು ಗುಂಡಿನ ದಾಳಿ ನಡೆಸಿದ್ದು, ಇದಕ್ಕೆ ಭದ್ರತಾ ಪಡೆಯು ಪ್ರತ್ಯುತ್ತರ ನೀಡಿದೆ’ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದರು.
‘ಈ ಗುಂಡಿನ ಚಕಮಕಿಯಲ್ಲಿ ಉಗ್ರನೊಬ್ಬ ಮೃತಪಟ್ಟಿದ್ದಾನೆ. ಆತನ ಗುರುತನ್ನು ಪತ್ತೆ ಹಚ್ಚಲಾಗುತ್ತಿದೆ. ಸದ್ಯ ಕಾರ್ಯಾಚರಣೆ ಮುಂದುವರಿದಿದೆ’ ಎಂದು ಅವರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.