ADVERTISEMENT

ಶೋಪಿಯಾನ್ ಎನ್‌ಕೌಂಟರ್: ಉಗ್ರನ ಹತ್ಯೆ

ಪಿಟಿಐ
Published 22 ಜನವರಿ 2022, 11:21 IST
Last Updated 22 ಜನವರಿ 2022, 11:21 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಶನಿವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಉಗ್ರನೊಬ್ಬ ಹತ್ಯೆಗೀಡಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ದಕ್ಷಿಣ ಕಾಶ್ಮೀರ ಜಿಲ್ಲೆಯ ಕಿಲ್‌ಬಲ್ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ನಡೆಸಿದ್ದವು ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಶೋಧ ಕಾರ್ಯಾಚರಣೆಯ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದರು. ಈ ವೇಳೆ ಭದ್ರತಾ ಪಡೆಗಳು ನಡೆಸಿದ ಪ್ರತಿದಾಳಿಯಲ್ಲಿ ಓರ್ವ ಉಗ್ರ ಹತ್ಯೆಗೀಡಾಗಿದ್ದಾನೆ.

ಈತ ಯಾವ ಭಯೋತ್ಪಾದನಾ ಸಂಘಟನೆಗೆ ಸೇರಿದ ಉಗ್ರ ಎಂಬುದನ್ನು ಖಚಿತಪಡಿಸಲಾಗುತ್ತಿದೆ.

ಪ್ರದೇಶದಲ್ಲಿ ಕಾರ್ಯಾಚರಣೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.