ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಭದ್ರತಾಪಡೆಗಳು ಶುಕ್ರವಾರ ನಡೆಸಿದ ಎನ್‌ಕೌಂಟರ್‌ಗೆ ಒಬ್ಬ ಉಗ್ರ ಬಲಿಯಾಗಿದ್ದಾನೆ.
ತಹರ್‌ಗಾಂ ಅರಣ್ಯ ಪ್ರದೇಶದಲ್ಲಿ ಉಗ್ರರು ಅವಿತಿರುವ ಮಾಹಿತಿ ಅರಿತು ಭದ್ರತಾ ಪಡೆಗಳು ಶೋಧ ಕಾರ್ಯ ನಡೆಸುತ್ತಿದಾಗ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಒಬ್ಬ ಉಗ್ರನನ್ನು ಹತ್ಯೆಗೈಯಲಾಗಿದೆ ಎಂದು ಸೇನೆಯ ಅಧಿಕಾರಿಗಳು ತಿಳಿಸಿದ್ದಾರೆ.
ಮೃತ ಉಗ್ರನ ಗುರುತು ಪತ್ತೆಯಾಗಿಲ್ಲ ಎಂದೂ ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.