ಶ್ರೀನಗರ: ಜಮ್ಮು–ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಸಿಆರ್‌ಪಿಎಫ್ ತಂಡದ ಮೇಲೆ ಮಂಗಳವಾರ ಬೆಳಿಗ್ಗೆ ಉಗ್ರರು ನಡೆಸಿದ ದಾಳಿಯಲ್ಲಿ ಒಬ್ಬರು ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕ್ರಾಲ್‌ಚೆಕ್ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿ ರಸ್ತೆ ತೆರವು ಕಾರ್ಯ ನಡೆಸುತ್ತಿದ್ದಾಗ ಉಗ್ರರು ದಾಳಿ ನಡೆಸಿದ್ದಾರೆ. ಈ ವೇಳೆ ಸಿಬ್ಬಂದಿ ಅಜಯ್ ಕುಮಾರ್ ಗಾಯಗೊಂಡಿದ್ದಾರೆ.
ಘಟನಾ ಸ್ಥಳವನ್ನು ಭದ್ರತಾ ಪಡೆಗಳು ಸುತ್ತುವರಿದಿದ್ದು, ಉಗ್ರರಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.