ADVERTISEMENT

ಶೋಪಿಯಾನ್: ಭದ್ರತಾ ಪಡೆಯ ಎನ್‌ಕೌಂಟರ್‌ಗೆ ಇಬ್ಬರು ಉಗ್ರರು ಬಲಿ

ಪಿಟಿಐ
Published 14 ಅಕ್ಟೋಬರ್ 2020, 11:12 IST
Last Updated 14 ಅಕ್ಟೋಬರ್ 2020, 11:12 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶ್ರೀನಗರ: ಜಮ್ಮು–ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತ್ಯೆಯಾಗಿದ್ದಾರೆ.

ಉಗ್ರರು ಇದ್ದಾರೆ ಎಂಬ ಖಚಿತ ಮಾಹಿತಿ ಆಧರಿಸಿ ಭದ್ರತಾ ಪಡೆಗಳು ಶೋಪಿಯಾನ್‌ ಜಿಲ್ಲೆಯ ಚಕುರಾ ಪ್ರದೇಶದಲ್ಲಿ ಶೋಧ ಕಾರ್ಯಾಚಾರಣೆ ನಡೆಸಿದ್ದಾರೆ.

ಉಗ್ರರಿಗಾಗಿ ನಡೆಸುತ್ತಿದ್ದ ಶೋಧ ಕಾರ್ಯ, ಒಂದು ಹಂತದಲ್ಲಿ ಎನ್‌ಕೌಂಟರ್‌ಗೆ ತಿರುಗಿತು. ಭದ್ರತಾ ಪಡೆಗಳು ಉಗ್ರರ ಗುಂಪಿನತ್ತ ಗುಂಡು ಹಾರಿಸಿದರು.

ADVERTISEMENT

‘ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಬಲಿಯಾಗಿದ್ದಾರೆ. ಹತ್ಯೆಯಾದ ಉಗ್ರರು ಯಾವ ಉಗ್ರ ಸಂಘಟನೆಗೆ ಸೇರಿದವರು ಎಂಬುದನ್ನು ಪತ್ತೆ ಮಾಡಲಾಗುತ್ತಿದೆ‘ ಎಂದುಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.