ADVERTISEMENT

ಜಮ್ಮು–ಕಾಶ್ಮೀರ: ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ ಇಬ್ಬರು ಉಗ್ರರು ಬಲಿ

ಪಿಟಿಐ
Published 11 ಏಪ್ರಿಲ್ 2021, 8:39 IST
Last Updated 11 ಏಪ್ರಿಲ್ 2021, 8:39 IST
ಉಗ್ರ ನಿಗ್ರಹ ಕಾರ್ಯಾಚರಣೆಯಲ್ಲಿ ತೊಡಗಿರುವ ಭದ್ರತಾ ಪಡೆ–ಸಾಂದರ್ಭಿಕ ಚಿತ್ರ
ಉಗ್ರ ನಿಗ್ರಹ ಕಾರ್ಯಾಚರಣೆಯಲ್ಲಿ ತೊಡಗಿರುವ ಭದ್ರತಾ ಪಡೆ–ಸಾಂದರ್ಭಿಕ ಚಿತ್ರ   

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ತಡರಾತ್ರಿ ನಡೆದಿರುವ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರನ್ನು ಎನ್‌ಕೌಂಟರ್‌ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದಕ್ಷಿಣ ಕಾಶ್ಮೀರದ ಶೋಪಿಯಾನ್‌ನ ಹಾದಿಪೊರಾದಲ್ಲಿ ಭದ್ರತಾ ಪಡೆಗಳು ಉಗ್ರರ ಶೋಧ ಕಾರ್ಯಾಚರಣೆ ನಡೆಸಿವೆ. ಶನಿವಾರ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ಉಗ್ರ ಹತನಾಗಿದ್ದ. ಈಗ ಒಟ್ಟು ಎನ್‌ಕೌಂಟರ್‌ ಆದವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.

'ಇತ್ತೀಚೆಗಷ್ಟೇ ಉಗ್ರರ ಗುಂಪಿಗೆ ಸೇರ್ಪಡೆಯಾಗಿದ್ದ ಸ್ಥಳೀಯ ವ್ಯಕ್ತಿಯ ಮನವೊಲಿಸಲು ಭದ್ರತಾ ಪಡೆಗಳು ಪ್ರಯತ್ನಿಸಿವೆ. ಆತನ ಪಾಲಕರು ಸಹ ಶರಣಾಗುವಂತೆ ಮನವಿ ಮಾಡಿದ್ದಾರೆ, ಆದರೆ ಇತರೆ ಉಗ್ರರು ಆತನನ್ನು ಬಿಟ್ಟುಕೊಡಲಿಲ್ಲ' ಎಂದು ಕಾಶ್ಮೀರದ ಐಜಿಪಿ ವಿಜಯ್‌ ಕುಮಾರ್ ಹೇಳಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.