ADVERTISEMENT

ಕಾಶ್ಮೀರ: ಉಗ್ರರಿಂದ ವಲಸೆ ಕಾರ್ಮಿಕನ ಮೇಲೆ ಗುಂಡಿನ ದಾಳಿ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2022, 14:37 IST
Last Updated 2 ಸೆಪ್ಟೆಂಬರ್ 2022, 14:37 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಶ್ರೀನಗರ: ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ನೇವಾ ಪ್ರದೇಶದಲ್ಲಿ, ಉಗ್ರರು ವಲಸೆ ಕಾರ್ಮಿಕನೊಬ್ಬನ ಮೇಲೆ ಗುಂಡಿನ ದಾಳಿ ನಡೆಸಿದ್ದು, ಕಾರ್ಮಿಕ ಗಾಯಗೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.‌

‘ಪಶ್ಚಿಮ ಬಂಗಾಳದ ನಿವಾಸಿಯಾದ ಮುನೀರುಲ್‌ ಇಸ್ಲಾಮ್‌ ಎಂಬ ವಲಸೆ ಕಾರ್ಮಿಕನ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಮುನೀರುಲ್‌ನನ್ನು ಕೂಡಲೇ ಪುಲ್ವಾಮಾದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆತನ ಆರೋಗ್ಯ ಸ್ಥಿರವಾಗಿದೆ. ನೇವಾದಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ’ ಎಂದು ಕಾಶ್ಮೀರ ವಲಯದ ಪೊಲೀಸರು ಟ್ವೀಟ್‌ ಮಾಡಿದ್ದಾರೆ.

ಕಾಶ್ಮೀರದಲ್ಲಿ, ವಿಶೇಷವಾಗಿ ದಕ್ಷಿಣ ಕಾಶ್ಮೀರದಲ್ಲಿ ವಲಸೆ ಕಾರ್ಮಿಕರ ಮೇಲಿನ ದಾಳಿಗಳು ಹೆಚ್ಚಾಗುತ್ತಿವೆ. ಈ ವರ್ಷ ಕಾಶ್ಮೀರದಾದ್ಯಂತ ಕನಿಷ್ಠ 10 ಮಂದಿ ವಲಸೆ ಕಾರ್ಮಿಕರನ್ನು ಉಗ್ರರು ಹತ್ಯೆ ಮಾಡಿದ್ದಾರೆ.

ADVERTISEMENT

ಕಳೆದ ವರ್ಷ ಅಕ್ಟೋಬರ್‌ನಲ್ಲಿ ಅನೇಕ ವಲಸೆ ಕಾರ್ಮಿಕರು ಹಾಗೂ ಬೀದಿ ವ್ಯಾಪಾರಿಗಳನ್ನು ಉಗ್ರರು ಕೊಂದಿದ್ದರು. 2019ರ ಅಕ್ಟೋಬರ್‌ ವೇಳೆಗೆ ಅನಂತ್‌ನಾಗ್‌, ಕುಲ್ಗಾಮ್ ಹಾಗೂ ಶೋಪಿಯಾನ್‌ ಜಿಲ್ಲೆಗಳಲ್ಲಿ ಟ್ರಕ್‌ ಚಾಲಕರು ಸೇರಿದಂತೆ ಒಟ್ಟು 11 ಮಂದಿ ವಲಸೆ ಕಾರ್ಮಿಕರನ್ನು ಹತ್ಯೆ ಮಾಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.