ನವದೆಹಲಿ: ತೃಣ ಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮಾಜಿ ಸಂಸದೆ ಮಿಮಿ ಚಕ್ರವರ್ತಿ ಅವರು ಸೋಮವಾರ ಜಾರಿ ನಿರ್ದೇಶನಾಲಯದ (ಇ.ಡಿ) ಎದುರು ವಿಚಾರಣೆಗೆ ಹಾಜರಾಗಿದ್ದಾರೆ.
‘1x ಬೆಟ್’ ಎಂಬ ಬೆಟ್ಟಿಂಗ್ ಆ್ಯಪ್‌ಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣ ಇದಾಗಿದ್ದು, ಮಿಮಿ ಅವರ ಹೇಳಿಕೆಗಳನ್ನು ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅನ್ವಯ ದಾಖಲಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಮಿಮಿ ಅವರು ಆ್ಯಪ್ ಜತೆಗೆ ಕೆಲವು ಹಣಕಾಸು ವಹಿವಾಟುಗಳನ್ನು ನಡೆಸಿದ್ದಾರೆ ಎಂಬುದು ತಿಳಿದುಬಂದಿದೆ. ಅಕ್ರಮ ಆ್ಯಪ್ ಜತೆಗೆ ಅವರಿಗಿರುವ ನಂಟನ್ನು ತಿಳಿಯುವ ಸಲುವಾಗಿ ಇ.ಡಿ ಈ ವಿಚಾರಣೆ ನಡೆಸಿದೆ ಎನ್ನಲಾಗಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟಿಗರಾದ ಸುರೇಶ್ ರೈನಾ, ಶಿಖರ್ ಧವನ್ ಅವರನ್ನೂ ಈ ಹಿಂದೆ ವಿಚಾರಣೆ ನಡೆಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.