ADVERTISEMENT

ಸಚಿವ ಸೆಂಥಿಲ್ ಬಾಲಾಜಿ ಎಚ್‌ಸಿಪಿ: ಮದ್ರಾಸ್ ಹೈಕೋರ್ಟ್‌ನಿಂದ ಭಿನ್ನ ತೀರ್ಪು

ಪಿಟಿಐ
Published 4 ಜುಲೈ 2023, 7:19 IST
Last Updated 4 ಜುಲೈ 2023, 7:19 IST
Minister Senthil Balaji 
Minister Senthil Balaji    

ಚೆನ್ನೈ: ತಮಿಳುನಾಡಿನ ಸಚಿವ, ಬಂಧನದಲ್ಲಿರುವ ವಿ ಸೆಂಥಿಲ್ ಬಾಲಾಜಿ ಅವರ ಹೇಬಿಯಸ್ ಕಾರ್ಪಸ್ ಅರ್ಜಿಯ(ಎಚ್‌ಸಿಪಿ) ಕುರಿತು ಮದ್ರಾಸ್ ಹೈಕೋರ್ಟ್‌ನ ವಿಭಾಗೀಯ ಪೀಠ ಮಂಗಳವಾರ ಭಿನ್ನ ತೀರ್ಪು ನೀಡಿದೆ.

ನ್ಯಾಯಮೂರ್ತಿಗಳಾದ ಜೆ ನಿಶಾ ಬಾನು ಮತ್ತು ಡಿ ಭರತ ಚಕ್ರವರ್ತಿ ಅವರನ್ನೊಳಗೊಂಡ ಪೀಠ ಈ ಬಗ್ಗೆ ತೀರ್ಪು ಪ್ರಕಟಿಸಿತು.

ತನ್ನ ಪತಿಯನ್ನು ಅಕ್ರಮವಾಗಿ ಬಂಧಿಸಲಾಗಿದೆ ಎಂದು ಬಾಲಾಜಿ ಪತ್ನಿ ಸಲ್ಲಿಸಿದ್ದ ಅರ್ಜಿಯ ಪರವಾಗಿ ತೀರ್ಪಿತ್ತ ನ್ಯಾಯಮೂರ್ತಿ ನಿಶಾ ಬಾನು ಅವರು, ಬಾಲಾಜಿ ಅವರನ್ನು ಮುಕ್ತಗೊಳಿಸಬೇಕೆಂದು ಹೇಳಿದರು. ಆದರೆ, ಮತ್ತೊಬ್ಬ ನ್ಯಾಯಮೂರ್ತಿಗಳು ಇದನ್ನು ಒಪ್ಪಲಿಲ್ಲ. ನಂತರ, ವಿಭಾಗೀಯ ಪೀಠವು ಈ ವಿಷಯದ ವಿಚಾರಣೆಯನ್ನು ಮತ್ತೊಂದು ಪೀಠಕ್ಕೆ ವರ್ಗಾಯಿಸಲು ಮುಖ್ಯ ನ್ಯಾಯಮೂರ್ತಿಗಳಿಗೆ ಶಿಫಾರಸು ಮಾಡಲು ನಿರ್ಧರಿಸಿದೆ.

ADVERTISEMENT

ಹಿಂದಿನ ಎಐಎಡಿಎಂಕೆ ಸರ್ಕಾರದಲ್ಲಿ ಸಾರಿಗೆ ಸಚಿವರಾಗಿದ್ದಾಗ ಉದ್ಯೋಗಕ್ಕಾಗಿ ಹಣ ಹಗರಣಕ್ಕೆ ಸಂಬಂಧಿಸಿದಂತೆ ಬಾಲಾಜಿ ಅವರನ್ನು ಜೂನ್ 14ರಂದು ಇ.ಡಿ ಬಂಧಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.