ADVERTISEMENT

ರೈತರ ಪ್ರತಿಭಟನೆ: ದೆಹಲಿಯ ಗಡಿ ಭಾಗಗಳಲ್ಲಿ ಫೆ.2ರವರೆಗೆ ಅಂತರ್ಜಾಲ ಸೇವೆ ಸ್ಥಗಿತ

​ಪ್ರಜಾವಾಣಿ ವಾರ್ತೆ
Published 1 ಫೆಬ್ರುವರಿ 2021, 8:11 IST
Last Updated 1 ಫೆಬ್ರುವರಿ 2021, 8:11 IST
   

ನವದಹಲಿ: ರೈತರು ಪ್ರತಿಭಟನೆ ನಡೆಸುತ್ತಿರುವ ದೆಹಲಿಯ ಗಡಿ ಪ್ರದೇಶಗಳಲ್ಲಿ ಇಂಟರ್ನೆಟ್‌ ಸೇವೆ ಕಡಿತಗೊಳಿಸಲಾಗಿರುವ ಕ್ರಮವನ್ನು ಫೆಬ್ರವರಿ 2ರ ರಾತ್ರಿ 11 ಗಂಟೆ ವರೆಗೆ ವಿಸ್ತರಿಸಲಾಗಿದೆ.

ಕೇಂದ್ರ ಸರ್ಕಾರದ ಹೊಸ ಕೃಷಿ ಕಾಯ್ದೆಗಳನ್ನು ರದ್ದು ಪಡಿಸುವಂತೆ ಕೋರಿ ಎರಡು ತಿಂಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಫೆಬ್ರವರಿ 2 ರಂದು ಕೇಂದ್ರ ನಾಯಕರು ಮತ್ತು ರೈತರು ಸಭೆ ಸೇರಲಿದ್ದಾರೆ.

ದೆಹಲಿಯ ಟಿಕ್ರಿ, ಸಿಂಘು ಮತ್ತು ಘಾಜಿಪುರ್‌ ಗಡಿ ಪ್ರದೇಶಗಳಲ್ಲಿ ಜನವರಿ 29ರ ರಾತ್ರಿ 11ರಿಂದ ಜನವರಿ 31ರ ರಾತ್ರಿ 11ರ ವರೆಗೂ ತಾತ್ಕಾಲಿಕವಾಗಿ ಅಂತರ್ಜಾಲ ಸೇವೆಗಳನ್ನು ಕಡಿತಗೊಳಿಸುವುದು ಅವಶ್ಯವಿರುವುದರಿಂದ ಆದೇಶ ನೀಡಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯದ ಪ್ರಕಟಿಸಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.