ADVERTISEMENT

60ಕ್ಕೂ ಹೆಚ್ಚು ಜನರಿಂದ ಲೈಂಗಿಕ ದೌರ್ಜನ್ಯ: ಕರಾಳ ಅನುಭವ ಬಿಚ್ಚಿಟ್ಟ ದಲಿತ ಯುವತಿ

ಪಿಟಿಐ
Published 11 ಜನವರಿ 2025, 12:31 IST
Last Updated 11 ಜನವರಿ 2025, 12:31 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

Credit: iStock Photo

ಪತ್ತನಂತಿಟ್ಟ (ಕೇರಳ): ಕಳೆದ 2 ವರ್ಷಗಳಲ್ಲಿ 60ಕ್ಕೂ ಹೆಚ್ಚು ಜನರಿಂದ ಲೈಂಗಿಕ ದೌರ್ಜನ್ಯ ಒಳಗಾಗಿದ್ದೇನೆ ಎಂದು ಕ್ರೀಡಾಪಟುವಾಗಿರುವ ದಲಿತ ಯುವತಿಯೊಬ್ಬರು ತಮಗಾದ ಕಹಿ ಅನುಭವವನ್ನು ಬಿಚ್ಚಿಟ್ಟಿದ್ದಾರೆ.

ADVERTISEMENT

ಪ್ರಕರಣ ಸಂಬಂಧ ಇದುವರೆಗೆ 15 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪತ್ತನಂತಿಟ್ಟ ಜಿಲ್ಲೆಯ ಎರಡು ಪೊಲೀಸ್ ಠಾಣೆಗಳಲ್ಲಿ ಐದು ಪ್ರಕರಣಗಳು ದಾಖಲಾದ ಬೆನ್ನಲ್ಲೇ ಶುಕ್ರವಾರ ಆರು ಮಂದಿಯನ್ನು ಬಂಧಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.

ನಾನು ಕಳೆದ ಎರಡು ವರ್ಷಗಳಿಂದ ಅನೇಕ ಬಾರಿ ಅತ್ಯಾಚಾರಕ್ಕೆ ಒಳಗಾಗಿದ್ದೇನೆ ಎಂದು 18 ವರ್ಷದ ಯುವತಿ ದೂರು ನೀಡಿದ್ದಾರೆ. ಆಕೆ ನೀಡಿರುವ ಹೇಳಿಕೆಯನ್ನು ಆಧರಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದೆಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಂತ್ರಸ್ತೆ 16 ವರ್ಷ ವಯಸ್ಸಿನವಳಾಗಿದ್ದಾಗ ಆಕೆಯ ಕೋಚ್‌ಗಳು, ಸಹ ಕ್ರೀಡಾಪಟುಗಳು, ಸಹಪಾಠಿಗಳು ಸೇರಿದಂತೆ 60ಕ್ಕೂ ಹೆಚ್ಚು ಜನರು ದುರುಪಯೋಗಪಡಿಸಿಕೊಂಡಿದ್ದಾರೆ ಎಂಬುದಕ್ಕೆ ಸಾಕ್ಷ್ಯಗಳು ಸಿಕ್ಕಿವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಶಂಕಿತ ಆರೋಪಿಗಳೊಂದಿಗೆ ಸಂವಹನ ನಡೆಸಲು ತಂದೆಯ ಮೊಬೈಲ್ ಬಳಸಿರುವುದಾಗಿ ಸಂತ್ರಸ್ತೆ ಹೇಳಿಕೆ ನೀಡಿದ್ದಾರೆ. ಜತೆಗೆ, ಆಕೆ ಬರೆದಿಟ್ಟಿದ್ದ ಡೈರಿಯನ್ನು ಪರಿಶೀಲಿಸುವ ಮೂಲಕ 40 ಜನರ ಗುರುತು, ಮೊಬೈಲ್‌ ಸಂಖ್ಯೆ ಸೇರಿದಂತೆ ಇತರೆ ಮಾಹಿತಿಯನ್ನು ಕಲೆಹಾಕಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣದಲ್ಲಿ 60ಕ್ಕೂ ಹೆಚ್ಚು ಜನರು ಭಾಗಿಯಾಗಿರುವ ಸಾಧ್ಯತೆ ಇದೆ. ಆರೋಪಿಗಳ ವಿರುದ್ಧ ಪೋಕ್ಸೊ ಕಾಯ್ದೆ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯ ವಿವಿಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.