ಲಡಾಖ್‌ನಲ್ಲಿ ಭೂಕಂಪ
(ಚಿತ್ರ ಕೃಪೆ: X/@NCS_Earthquake)
ಶ್ರೀನಗರ: ಕೇಂದ್ರಾಡಳಿತ ಪ್ರದೇಶ ಲಡಾಖ್‌ನಲ್ಲಿ ಇಂದು (ಬುಧವಾರ) ಬೆಳಿಗ್ಗೆ ಕಡಿಮೆ ತೀವ್ರತೆಯ ಭೂಕಂಪ ಸಂಭವಿಸಿದೆ.
ರಿಕ್ಟರ್ ಮಾಪಕದಲ್ಲಿ 4.4ರಷ್ಟು ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪ ವಿಜ್ಞಾನ ಕೇಂದ್ರ (ಎನ್‌ಸಿಎಸ್) ತಿಳಿಸಿದೆ.
ಭೂಕಂಪನದ ಕೇಂದ್ರ ಬಿಂದು ಲೇಹ್ ಆಗಿದ್ದು, 150 ಕಿ.ಮೀ ಆಳದಲ್ಲಿ ಭೂಮಿ ಕಂಪಿಸಿದೆ ಎಂದು ತಿಳಿಸಿದೆ. ಇಂದು ಬೆಳಿಗ್ಗೆ ಸುಮಾರು 8 ಗಂಟೆ ಹೊತ್ತಿಗೆ ಭೂಕಂಪ ಸಂಭವಿಸಿದೆ.
ಜೂನ್ 28ರಂದು ಅಂಡಮಾನ್ ಸಮುದ್ರದಲ್ಲಿ 4.5 ತೀವ್ರತೆಯ ಭೂಕಂಪ ಸಂಭವಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.